ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನ ಸೆ.24ಕ್ಕೆ ವಿಸ್ತರಣೆ
Update: 2023-09-22 22:24 IST
Chandrababu Naidu: Photo: PTI
ವಿಜಯವಾಡಾ: ಇಲ್ಲಿಯ ಭ್ರಷ್ಟಾಚಾರ ನಿಗ್ರಹ ಘಟಕ ವಿಶೇಷ ನ್ಯಾಯಾಲಯವು ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಟಿಡಿಪಿ ವರಿಷ್ಠ ಎನ್.ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಸೆ.24ರವರೆಗೆ ವಿಸ್ತರಿಸಿ ಶುಕ್ರವಾರ ಆದೇಶಿಸಿದೆ.
ಕೌಶಲ್ಯಾಭಿವೃದ್ಧಿ ನಿಗಮದಿಂದ ಹಣವನ್ನು ದುರುಪಯೋಗಿಸಿಕೊಂಡ ಮತ್ತು ಸರಕಾರದ ಬೊಕ್ಕಸಕ್ಕೆ 300 ಕೋ.ರೂ.ಗೂ ಅಧಿಕ ನಷ್ಟವನ್ನುಂಟು ಮಾಡಿದ ಆರೋಪದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾಯ್ಡು ಅವರನ್ನು ಸೆ.9ರಂದು ಬಂಧಿಸಲಾಗಿತ್ತು. ಪ್ರಸ್ತುತ ಅವರನ್ನು ರಾಜಮಹೇಂದ್ರವರಂ ಸೆಂಟ್ರಲ್ ಜೈಲಿನಲ್ಲಿ ಇರಿಸಲಾಗಿದೆ.