ಛತ್ತೀಸ್‌ಗಢ | ಭದ್ರತಾ ಪಡೆಗಳಿಂದ 10 ಮಂದಿ ನಕ್ಸಲರ ಹತ್ಯೆ
Update: 2025-09-11 21:44 IST
ಸಾಂದರ್ಭಿಕ ಚಿತ್ರ |livemint
ಛತ್ತೀಸ್‌ಗಢ : ಗರಿಯಾಬಂದ್ ಜಿಲ್ಲೆಯಲ್ಲಿ ಕನಿಷ್ಠ 10 ನಕ್ಸಲರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ನಕ್ಸಲ್ ವಿರೋಧಿ ಕಾರ್ಯಾಚರಣೆ ವೇಳೆ ಮೈನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ರಾಯ್ಪುರ ಐಜಿಪಿ ಅಮರೇಶ್ ಮಿಶ್ರಾ ತಿಳಿಸಿದ್ದಾರೆ.
ಮಣಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುಂಡಿನ ದಾಳಿ ನಡೆದಿದೆ. ಎಸ್‌ಟಿಎಫ್, ಸಿಆರ್‌ಪಿಎಫ್‌ನ ಕೋಬ್ರಾ, ರಾಜ್ಯ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಂದುವರಿದಿದೆ ಎಂದು ರಾಯ್ಪುರ ಐಜಿಪಿ ಅಮರೇಶ್ ಮಿಶ್ರಾ ತಿಳಿಸಿದ್ದಾರೆ.