ಛತ್ತೀಸ್‌ಗಢದಲ್ಲಿ ಐಇಡಿ ಸ್ಫೋಟ; ಯುವಕ ಮೃತ್ಯು
ಸಾಂದರ್ಭಿಕ ಚಿತ್ರ (PTI)
ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲೀಯರು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಉಸೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ತೂರಿಪಾಡ್ ಗ್ರಾಮದ ನಿವಾಸಿ ಆಯತ ಕುಹರಾಮಿ ರವಿವಾರ ಸಮೀಪದ ಕಾಡಿಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಆತ ಐಇಡಿ ಮೇಲೆ ಕಾಲಿರಿಸಿದ. ಪರಿಣಾಮ ಐಇಡಿ ಸ್ಫೋಟಗೊಂಡಿತು ಹಾಗೂ ಆತನ ಕಾಲುಗಳಿಗೆ ತೀವ್ರ ಗಾಯಗಳಾಯಿತು. ಗಾಯಗೊಂಡ ಆತನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅನಂತರ ಆತ ಮೃತಪಟ್ಟಿದ್ದಾನೆ ಎಂದು ಅವರು ಹೇಳಿದ್ದಾರೆ.
ಅರಣ್ಯ ಹಾಗೂ ದುರ್ಗಮ ಪ್ರದೇಶಗಳಿಗೆ ಹೋಗುವಾಗ ತೀವ್ರ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಗ್ರಾಮ ನಿವಾಸಿಗಳಲ್ಲಿ ಮನವಿ ಮಾಡಿದ್ದಾರೆ. ಯಾವುದೇ ಅನುಮಾನಾಸ್ಪದ ವಸ್ತುಗಳು, ಚಟುವಟಿಕೆಗಳು ಅಥವಾ ಸಾಮಗ್ರಿಗಳು ಕಂಡು ಬಂದರೆ, ಸಮೀಪದ ಪೊಲೀಸ್ ಠಾಣೆಗೆ ಅಧವಾ ಭದ್ರತಾ ಶಿಬಿರಕ್ಕೆ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.