×
Ad

ಛತ್ತೀಸ್‍ಗಢ: ಏಳು ನಕ್ಸಲರ ಹತ್ಯೆ, ಅಪಾರ ಶಸ್ತ್ರಾಸ್ತ್ರ ವಶ

Update: 2024-04-30 15:34 IST

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಛತ್ತೀಸ್‍ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜತೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ನಕ್ಸಲೀಯರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎಕೆ47 ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ಎನ್‍ಕೌಂಟರ್ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಮೀಸಲು ಪಡೆ ಹಾಗೂ ವಿಶೇಷ ಕಾರ್ಯಪಡೆಯ ಜಂಟಿ ಭದ್ರತಾ ಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ಮುಂಜಾನೆ 6ಕ್ಕೆ ಆರಂಭವಾಯಿತು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ನಾರಾಯಣಪುರ ಮತ್ತು ಕಂಕೇರ್ ಗಡಿಯಲ್ಲಿ ನಕ್ಸಲ್ ವಿರುದ್ಧದ ಕಾರ್ಯಾಚರಣೆಗಾಗಿ ಅಭೂಜ್‍ಮರ್ ಪ್ರದೇಶಕ್ಕೆ ಭದ್ರತಾ ಸಿಬ್ಬಂದಿ ತೆರಳಿದ್ದರು. ಟೆಕ್ಮೆಟಾ ಮತ್ತು ಕಕೂರ್ ಗ್ರಾಮಗಳ ನಡುವಿನ ಅರಣ್ಯದಲ್ಲಿ ಚಕಮಕಿ ನಡೆಯಿತು. ಘಟನಾ ಸ್ಥಳದಲ್ಲಿ ಶೋಧ ನಡೆಸಿದಾಗ ಏಳು ನಕ್ಸಲರ ಶವಗಳು ಪತ್ತೆಯಾಗಿವೆ. ಈ ಪೈಕಿ ಇಬ್ಬರು ಮಹಿಳೆಯರು. ಅವರ ಗುರುತು ಪತ್ತೆ ಮಾಡುವ ಕಾರ್ಯ ಸಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ತಿಂಗಳು ಭದ್ರತಾ ಪಡೆಗಳು 29 ನಕ್ಸರನ್ನು ಹತ್ಯೆ ಮಾಡಿದ್ದು, ಇವರಲ್ಲಿ ಹಿರಿಯ ಬಂಡುಕೋರ ನಾಯಕ ಶಂಕರ ರಾವ್ ಸೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News