Christmas | ಅಲಪ್ಪುಳದಲ್ಲಿ ಕರೋಲ್ ವೇಳೆ ಘರ್ಷಣೆ; ಮಹಿಳೆಯರು, ಮಕ್ಕಳು ಸೇರಿ ಹಲವರಿಗೆ ಗಾಯ
Update: 2025-12-25 17:20 IST
Photo Credit: thehindu
ಅಲಪ್ಪುಳ: ಕ್ರಿಸ್‌ಮಸ್ ಮುನ್ನಾದಿನ ಬುಧವಾರ ತಡರಾತ್ರಿ ಕೇರಳದ ಅಲಪ್ಪುಳದಲ್ಲಿ ಕ್ರಿಸ್‌ಮಸ್ ಕರೋಲ್ ಗಾಯಕರ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ, ಮಹಿಳೆಯರು ಮತ್ತು ಮಕ್ಕಳು ಸೇರಿ ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ ಸುಮಾರು 11.30ರ ವೇಳೆಗೆ ನೂರಾನಾಡ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕರೋಲ್ ಸುತ್ತುಗಳ ಸಂದರ್ಭದಲ್ಲಿ ಉಂಟಾದ ಭಿನ್ನಾಭಿಪ್ರಾಯ ತೀವ್ರಗೊಂಡು ಜಗಳಕ್ಕೆ ತಿರುಗಿದೆ ಎನ್ನಲಾಗಿದೆ. ಎರಡೂ ಗುಂಪಿನ ಸದಸ್ಯರು ಪರಸ್ಪರ ಮುಖಾಮುಖಿಯಾದಾಗ ಪರಿಸ್ಥಿತಿ ಉದ್ವಿಗ್ನಗೊಂಡು ಗದ್ದಲ ಉಂಟಾಯಿತು ಎಂದು ಪೊಲೀಸರು ಹೇಳಿದ್ದಾರೆ.
ಘರ್ಷಣೆಯಲ್ಲಿ ಗಾಯಗೊಂಡವರನ್ನು ಗುರುವಾರ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.