ದಿಲ್ಲಿ ಏರ್‌ಪೋರ್ಟ್‌ನಲ್ಲಿ ಗುಂಡಿಕ್ಕಿ ಸಿಐಎಸ್‌ಎಫ್ ಮಹಿಳಾ ಸಿಬ್ಬಂದಿ ಆತ್ಮಹತ್ಯೆ
Update: 2025-03-07 21:16 IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಇಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ ಮಹಿಳಾ ಹೆಡ್ ಕಾನ್‌ಸ್ಟೇಬಲ್ ಶುಕ್ರವಾರ ಟರ್ಮಿನಲ್ 3ರಲ್ಲಿಯ ವಾಷ್‌ರೂಮ್‌ನಲ್ಲಿ ತನ್ನ ಸರ್ವಿಸ್ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದಿಲ್ಲಿ ಪೋಲಿಸರು ತಿಳಿಸಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು,ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.
ಆತ್ಮಹತ್ಯೆಗೆ ಕಾರಣವನ್ನು ತಿಳಿದುಕೊಳ್ಳಲು ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.