×
Ad

ಗಣೇಶ ಪೂಜೆಯಂದು ಪ್ರಧಾನಿ ನನ್ನ ಮನೆಗೆ ಭೇಟಿ ನೀಡಿದ್ದರಲ್ಲಿ ತಪ್ಪೇನೂ ಇಲ್ಲ: ಸಿಜೆಐ ಡಿ ವೈ ಚಂದ್ರಚೂಡ್

Update: 2024-11-04 21:10 IST

ಹೊಸದಿಲ್ಲಿ: ಗಣೇಶ ಚತುರ್ಥಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಭೇಟಿ ನೀಡಿದ್ದನ್ನು ಸೋಮವಾರ ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸಮರ್ಥಿಸಿಕೊಂಡಿದ್ದಾರೆ.

ಗಣೇಶ ಪೂಜೆಯಂದು ನನ್ನ ನಿವಾಸಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ಅದು ಸಾರ್ವಜನಿಕ ಭೇಟಿಯೇ ಹೊರತು ಖಾಸಗಿ ಭೇಟಿಯಾಗಿರಲಿಲ್ಲ. ನ್ಯಾಯಾಂಗ ಮತ್ತು ಕಾರ್ಯಾಂಗದ ಪ್ರತಿನಿಧಿಗಳ ಭೇಟಿಯಲ್ಲಿ ತಪ್ಪೇನಿಲ್ಲ ಎಂದು ಚಂದ್ರಚೂಡ್ ಹೇಳಿದ್ದಾರೆ.

ಸಿಜೆಐ ಅವರು ಅಯೋಧ್ಯೆ ತೀರ್ಪಿನ ಕುರಿತು ತಮ್ಮ ಹಿಂದಿನ ಹೇಳಿಕೆಗೆ ಪ್ರತಿಕಿಯಿಸಿ, ನಾನು ನಂಬಿಕೆಯುಳ್ಳ ವ್ಯಕ್ತಿ ಮತ್ತು ಎಲ್ಲಾ ಧರ್ಮಗಳನ್ನು ಸಮಾನವಾಗಿ ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಅಯೋಧ್ಯೆ ವಿವಾದ ಇತ್ಯರ್ಥಕ್ಕೆ ನಾನು ದೇವರಲ್ಲಿ ಪ್ರಾರ್ಥಿಸಿದ್ದೆ ಎಂದು ಸುಪ್ರೀಂಕೋರ್ಟ್ ಸಿಜೆಐ ಡಿ ವೈ ಚಂದ್ರಚೂಡ್ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News