×
Ad

ಜೈಪುರ | ನಾಲ್ಕನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಮೃತ್ಯು : ಘಟನಾ ಸ್ಥಳದಲ್ಲಿ ರಕ್ತದ ಕಲೆಗಳಿಲ್ಲ !

Update: 2025-11-02 07:59 IST

ಜೈಪುರ : ನಗರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದ ಘಟನಾ ಸ್ಥಳದಲ್ಲಿ ಯಾವುದೇ ರಕ್ತದ ಕಲೆಗಳು ಇಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬಾಲಕಿ ಮೇಲೆ ಏರುತ್ತಿರುವುದು ಹಾಗೂ ಕೆಳಗೆ ಹಾರುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾಣಿಸುತ್ತಿದೆ. ಆದರೆ, ಆಗ ಇತರ ವಿದ್ಯಾರ್ಥಿಗಳು ಸಹಜವಾಗಿ ನಡೆದಾಡುತ್ತಿರುವುದು ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸುಮಾರು 47 ಅಡಿ ಎತ್ತರದಿಂದ ಬಾಲಕಿ ಕೆಳಕ್ಕೆ ಬಿದ್ದಿದ್ದಾಳೆ ಎಂದು ವಿವರಿಸಿದ್ದಾರೆ.

ಇದು ಆತ್ಮಹತ್ಯೆ ಎನ್ನುವುದು ಪ್ರಾಥಮಿಕ ಪುರಾವೆಗಳಿಂದ ಕಂಡುಬರುತ್ತಿದೆ. ಆದರೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ.

ನೀರ್ಜಾ ಮೋದಿ ಶಾಲೆಯ ನಾಲ್ಕನೇ ಮಹಡಿಯಿಂದ ಬಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಅಮಾರಿಯಾಳನ್ನು ತಕ್ಷಣ ಪಕ್ಕದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಕೆ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು ಎಂದು ಮಾನಸಸರೋವರ ಠಾಣಾಧಿಖಾರಿ ಲಖನ್ ಕಠಾನಾ ಹೇಳಿದ್ದಾರೆ.

ಆದರೆ ಪೊಲೀಸರು ಘಟನಾ ಸ್ಥಳಕ್ಕೆ ತಲುಪಿದಾಗ ಬಾಲಕಿ ಬಿದ್ದಿದ್ದ ಜಾಗದಲ್ಲಿ ಯಾವುದೇ ರಕ್ತದ ಕಲೆಗಳು ಇರಲಿಲ್ಲ. ಸ್ವಚ್ಛಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News