ಸುಪ್ರೀಂ ಕೋರ್ಟ್ ಕಾನೂನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಿ : ಬಿಜೆಪಿ ಸಂಸದ ನಿಶಿಕಾಂತ್ ದುಬೆ
Update: 2025-04-19 18:19 IST
ಬಿಜೆಪಿ ಸಂಸದ ನಿಶಿಕಾಂತ್ ದುಬೆ | PC : Sansad TV
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಕಾನೂನು ರೂಪಿಸುವುದಾದರೆ ಸಂಸತ್ ಭವನವನ್ನು ಮುಚ್ಚಬೇಕು ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಹಿಂದಿಯಲ್ಲಿ ಸಂಸದ ನಿಶಿಕಾಂತ್ ದುಬೆ ಪೋಸ್ಟ್ ಮಾಡಿದ್ದಾರೆ.
ವಕ್ಫ್ ತಿದ್ದುಪಡಿ ಕಾಯಿದೆಯ ಸಾಂವಿಧಾನಿಕತೆಯನ್ನು ಪ್ರಶ್ನಿಸಿರುವ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್ ಅಂಗಳದಲ್ಲಿರುವಾಗ ಜಾರ್ಖಂಡ್ನ ಗೊಡ್ಡಾದ ಬಿಜೆಪಿ ಸಂಸದ ನಿಶಿಕಾಂತ್ ದುಬೆಯ ಈ ಹೇಳಿಕೆ ಹೊರಬಿದ್ದಿದೆ.
ಇತ್ತೀಚಿಗೆ ರಾಜ್ಯ ವಿಧಾನಸಭೆ ಅಥವಾ ಸಂಸತ್ತು ಆಂಗೀಕರಿಸಿದ ಮಸೂದೆಗಳಿಗೆ ಉತ್ತರಿಸಲು ರಾಜ್ಯಪಾಲರು ಅಥವಾ ರಾಷ್ಟ್ರಪತಿಗಳಿಗೆ ಸುಪ್ರೀಂ ಕೋರ್ಟ್ ಕಾಲಮಿತಿ ನಿಗದಿಪಡಿಸಿತ್ತು.