×
Ad

ಉತ್ತರಾಖಂಡದ ಚಮೋಲಿಯಲ್ಲಿ ಮೇಘಸ್ಫೋಟ : ಹಲವರು ನಾಪತ್ತೆ ಶಂಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ

Update: 2025-08-23 11:29 IST
Photo credit: PTI

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟದ ಬಳಿಕ ಉದ್ಭವಿಸಿದ ಪ್ರವಾಹದಲ್ಲಿ ಮನೆಗಳು ಮತ್ತು ಕಟ್ಟಡಗಳು ಕುಸಿದು ಬಿದ್ದಿದೆ ಮತ್ತು ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಅಧಿಕಾರಿಗಳ ಪ್ರಕಾರ, ಥರಾಲಿ ಮಾರುಕಟ್ಟೆ ಪ್ರದೇಶ ಮತ್ತು ಥರಾಲಿ ತಹಸಿಲ್ ಸಂಕೀರ್ಣ ಅವಶೇಷಗಳಿಂದ ತುಂಬಿಕೊಂಡಿದೆ ಎಂದು ವರದಿಯಾಗಿದೆ.

ಸಗ್ವಾರ ಗ್ರಾಮದಲ್ಲಿ ಕಟ್ಟಡದ ಅವಶೇಷಗಳಡಿಯಲ್ಲಿ ಓರ್ವ ಬಾಲಕಿ ಸಿಲುಕಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆ ಮತ್ತು ಅವಶೇಷಗಳಿಂದ ತರಾಲಿ- ಗ್ವಾಲ್ಡಮ್ ರಸ್ತೆ ಮತ್ತು ತರಾಲಿ -ಸಗ್ವಾರ ರಸ್ತೆ ಬಂದ್ ಮಾಡಲಾಗಿದೆ. ಇದರಿಂದ ಸಂಚಾರಕ್ಕೆ ಅಡ್ಡಿಯಾಗಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ನಿನ್ನೆ ತಡರಾತ್ರಿ ಚಮೋಲಿ ಜಿಲ್ಲೆಯ ಥರಾಲಿ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದೆ. ಜಿಲ್ಲಾಡಳಿತ, ಎಸ್‌ಡಿಆರ್‌ಎಫ್‌ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿದೆ. ಸ್ಥಳೀಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ" ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News