×
Ad

ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಮೇಘಸ್ಫೋಟ: ಏಳು ಮಂದಿ ಮೃತ್ಯು

Update: 2025-08-17 11:48 IST

Photo credit: PTI

ಶ್ರೀನಗರ: ರವಿವಾರ ಮುಂಜಾನೆ ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ದೂರದ ಗ್ರಾಮವೊಂದರಲ್ಲಿ ಮೇಘ ಸ್ಫೋಟ ಸಂಭವಿಸಿದ್ದು, ಈ ಘಟನೆಯಲ್ಲಿ ಏಳು ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ರಾತ್ರಿ ಸುರಿದ ಭಾರಿ ಮಳೆಯ ನಂತರ ಈ ಘಟನೆ ನಡೆದಿದ್ದು, ಭಾರಿ ಮಳೆಯಿಂದಾಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೊಚ್ಚಿಕೊಂಡು ಹೋಗಿದೆ ಹಾಗೂ ಜಮೀನು ಮತ್ತು ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿದೆ. ಶನಿವಾರ ಮಧ್ಯರಾತ್ರಿ ರಾಜ್ ಬಾಗ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆಯೇ, ಕಡಿದಾದ ಕಣಿವೆ ಪ್ರದೇಶದಲ್ಲಿರುವ ಈ ಗ್ರಾಮದಲ್ಲಿ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಸ್ಥಳೀಯ ಸ್ವಯಂಸೇವಕರ ಜಂಟಿ ತಂಡವು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಘಟನೆಯಲ್ಲಿ ಗಾಯಗೊಂಡಿದ್ದ ಆರು ಮಂದಿಯನ್ನು ರಕ್ಷಿಸಿ, ಅವರನ್ನೆಲ್ಲ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಪಟ್ಟಂತೆಯೇ ನಡೆದಿರುವ ಇತರ ಘಟನೆಗಳಲ್ಲಿ ಕಥುವಾ ಪೊಲೀಸ್ ಠಾಣೆ ವ್ಯಾಪ್ತಿಯ ಬಗಾರ್ದ್ ಹಾಗೂ ಚಂಗ್ಡಾ ಗ್ರಾಮಗಳು ಹಾಗೂ ಲಖನ್ ಪುರ್ ನ ದಿಲ್ವಾನ್-ಹುಟ್ಲಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News