×
Ad

ಅತ್ಯಧಿಕ ಸಂಖ್ಯೆಯಲ್ಲಿ ಹೆಲಿಕಾಪ್ಟರ್ ನಿಯೋಜಿಸಲು ರಕ್ಷಣಾ ಸಚಿವರಿಗೆ ಸಿಎಂ ಸ್ಟಾಲಿನ್ ಮನವಿ

Update: 2023-12-19 22:38 IST

ಎಂ.ಕೆ. ಸ್ಟಾಲಿನ್ | Photo: PTI 

ಚೆನ್ನೈ: ಭಾರೀ ಮಳೆ ಸುರಿದು ಜಲಾವೃತಗೊಂಡ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಿಗಾಗಿ ತಕ್ಷಣ ಗರಿಷ್ಠ ಸಂಖ್ಯೆಯ ಹೆಲಿಕಾಪ್ಟರ್ಗಳನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರ ಸರಕಾರಕ್ಕೆ ಮಂಗಳವಾರ ಮನವಿ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿರುವ ಸ್ಟಾಲಿನ್, ಪ್ರವಾಹದಲ್ಲಿ ಸಿಲುಕಿಕೊಂಡ ಜನರನ್ನು ರಕ್ಷಿಸಲು ಹಾಗೂ ಜಲಾವೃತ ಪ್ರದೇಶಗಳಲ್ಲಿ ಆಹಾರ ಪೊಟ್ಟಣಗಳನ್ನು ಪೂರೈಕೆ ಮಾಡಲು ಈಗ ವಾಯು ಪಡೆಯ 4, ನೌಕಾ ಪಡೆ ಹಾಗೂ ತಟ ರಕ್ಷಣಾ ಪಡೆಯ ತಲಾ ಎರಡು ಹೆಲಿಕಾಪ್ಟರ್ಗಳನ್ನು ನಿಯೋಜಿಸಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸಲು ರಾಜ್ಯ ಸರಕಾರ ಅಧಿಕಾರಿಗಳು, ಎಸ್ ಡಿ ಆರ್ ಎಫ್ ಹಾಗೂ ಎನ್ ಡಿ ಆರ್ ಎಫ್ ನ ತಂಡವನ್ನು ಸಜ್ಜುಗೊಳಿಸಲಾಗಿದೆ. ಆದರೆ ರಸ್ತೆಗಳು ಜಲಾವೃತವಾಗಿರುವುದರಿಂದ ಜನರಿಗೆ ಆಹಾರ ಪೊಟ್ಟಣಗಳನ್ನು ಪೂರೈಸಲು ಸಾಧ್ಯವಾಗಿಲ್ಲ. ಅವರನ್ನು ಹೆಲಿಕಾಪ್ಟರ್ ಮೂಲಕ ಮಾತ್ರ ತಲುಪಲು ಸಾಧ್ಯ.

ತಂಬಿರಬಾರನಿ ನದಿ ಹಾಗೂ ಸಮೀಪದ ಪ್ರದೇಶಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೆರೆ ಸಂಭವಿಸಿರುವುದರಿಂದ ಶ್ರೀವೈಕುಂಠಂ ಹಾಗೂ ತೂತುಕುಡಿ ಪಟ್ಟಣದಲ್ಲಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News