×
Ad

ಕರ್ನಲ್ ಸೋಫಿಯಾ ಖುರೇಷಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ಮುಂದಿಟ್ಟು ಬಿಜೆಪಿಯಿಂದ ಅಭಿಯಾನ: Times of India ವರದಿ

Update: 2025-06-01 13:18 IST

ಲಕ್ನೋ: ಆಪರೇಷನ್ ಸಿಂಧೂರ್ ಕುರಿತ ಪತ್ರಿಕಾಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ಮುಂದಿಟ್ಟು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಭಿಯಾನವನ್ನು ನಡೆಸಲಿದೆ ಎಂದು Times of India ವರದಿ ಮಾಡಿದೆ.

ಜೂನ್ 9ರಂದು ನರೇಂದ್ರ ಮೋದಿ ನೇತೃತ್ವದ ಸರಕಾರ 11 ವರ್ಷಗಳನ್ನು ಪೂರೈಸಲಿದೆ. ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಕೇಂದ್ರಿತ ಅಭಿಯಾನ ನಡೆಸಲಿದೆ. ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ಮಹಿಳೆಯರಿಗೆ ಮಾದರಿಯಾಗಿ, ವಿಶೇಷವಾಗಿ ಅಲ್ಪ ಸಂಖ್ಯಾತ ಸಮುದಾಯಗಳಿಗೆ ಮಾದರಿಯಾಗಿ ಬಿಜೆಪಿ ಪ್ರಚಾರ ಮಾಡಲಿದೆ ಎಂದು ವರದಿಯು ಉಲ್ಲೇಖಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಎಂದು ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ, ದೇಶಾದ್ಯಂತದ ಎಲ್ಲಾ ಅಲ್ಪಸಂಖ್ಯಾತ ಸಂಸ್ಥೆಗಳು, ಮಸೀದಿಗಳು, ದರ್ಗಾಗಳು, ಗುರುದ್ವಾರಗಳು ಮತ್ತು ಚರ್ಚ್‌ಗಳ ಬಳಿ ಈ ಅಭಿಯಾನವನ್ನು ನಡೆಸಲಾಗುವುದು. ಮಹಿಳೆಯರನ್ನು ಸಬಲೀಕರಣಗೊಳಿಸುವುದು ಇದರ ಉದ್ದೇಶವಾಗಿದೆ. ಈ ಅಭಿಯಾನವು ಮಹಿಳೆಯರನ್ನು ಎನ್‌ಸಿಸಿ ಮತ್ತು ಅಗ್ನಿವೀರ್ ಯೋಜನೆಗೆ ಸೇರಲು ಪ್ರೋತ್ಸಾಹಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, ಕರ್ನಲ್ ಸೋಫಿಯಾ ಖುರೇಷಿ ಅಥವಾ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಅವರನ್ನು ಪ್ರಚಾರದ ಮುಖಗಳಾಗಿ ಬಳಸಿಕೊಳ್ಳುವ ಯಾವುದೇ ಯೋಜನೆ ಪಕ್ಷಕ್ಕೆ ಇಲ್ಲ. ʼಟೈಮ್ಸ್ ಆಫ್ ಇಂಡಿಯಾʼದ ವರದಿಯು ಸುಳ್ಳಿನಿಂದ ಕೂಡಿದೆ. ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News