×
Ad

ಮಧ್ಯಪ್ರದೇಶ: ಕೋಮು ಉದ್ವಿಗ್ನತೆಗೆ ತಿರುಗಿದ ಭಾರತದ ಚಾಂಪಿಯನ್ಸ್ ಟ್ರೋಫಿಯ ಗೆಲುವಿನ ಸಂಭ್ರಮಾಚರಣೆ

Update: 2025-03-10 11:42 IST

Screengrab: X

ಭೋಪಾಲ್: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಝಿಲೆಂಡ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಮಾಂಚಕ ಗೆಲುವು ಸಾಧಿಸಿದ ಕೆಲವೇ ಕ್ಷಣಗಳಲ್ಲಿ, ರವಿವಾರ ತಡರಾತ್ರಿ ಮಧ್ಯಪ್ರದೇಶದ ಇಂದೋರ್ ಬಳಿಯ ಮ್ಹೋವ್‌ನಲ್ಲಿ ನಡೆದ ಸಂಭ್ರಮಾಚರಣೆಯು ಕೋಮು ಉದ್ವಿಗ್ನತೆಗೆ ಕಾರಣವಾಯಿತು.

ಕಲ್ಲು ತೂರಾಟ ಶುರುವಾಗುತ್ತಿದ್ದಂತೆ ಎರಡು ಸಮುದಾಯಗಳ ನಡುವೆ ಉದ್ವಿಗ್ನ ವಾತಾವರಣ ಉಂಟಾಯಿತು ಎಂದು ತಿಳಿದು ಬಂದಿದೆ.

ರವಿವಾರ ರಾತ್ರಿ 10.30 ರ ಸುಮಾರಿಗೆ ಜಾಮಾ ಮಸೀದಿ ಪ್ರದೇಶದಲ್ಲಿ ಸಂಭ್ರಮಾಚರಣೆಯ ಮೆರವಣಿಗೆಯ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರ ವಿಚಾರವಾಗಿ ವಿವಾದ ಉಂಟಾಯಿತು. ಇದು ಬೇಗನೆ ಘರ್ಷಣೆಗೆ ಕಾರಣವಾಯಿತು. ಕಲ್ಲು ತೂರಾಟ ಆರಂಭವಾಗಿ ಅದು ಇತರ ಪ್ರದೇಶಗಳಿಗೂ ಹರಡಿತು ಎಂದು ವರದಿಯಾಗಿದೆ.

ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಅನ್ನು ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಶಾಂತಿ ಕಾಪಾಡಲು ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸ್ ಬಂದೋಬಸ್ತ್ ಇದ್ದರೂ, ಕಲ್ಲು ತೂರಾಟ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News