×
Ad

‘ಕಾಂಗ್ರೆಸ್ ತೊರೆಯಿರಿ ಅಥವಾ ಪರಿಣಾಮ ಎದುರಿಸಿ’ : ಬಜರಂಗ್ ಪುನಿಯಾಗೆ ವಾಟ್ಸಾಪ್‌ನಲ್ಲಿ ಬೆದರಿಕೆ

Update: 2024-09-08 22:14 IST

PC: PTI 

ಹೊಸದಿಲ್ಲಿ : “ತಕ್ಷಣವೇ ಕಾಂಗ್ರೆಸ್ ತೊರೆಯಿರಿ. ಇಲ್ಲದಿದ್ದರೆ ನೀವು, ನಿಮ್ಮ ಕುಟುಂಬ ಸದಸ್ಯರು ಘೋರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಒಲಿಂಪಿಯನ್ ಬಜರಂಗ್ ಪೂನಿಯಾ ಗೆ ರವಿವಾರ ವಾಟ್ಸಾಪ್ ನಲ್ಲಿ ಬೆದರಿಕೆ ಸಂದೇಶ ಬಂದಿದೆ ಎಂದು indianexpress.com ವರದಿ ಮಾಡಿದೆ.

ಬೆದರಿಕೆ ಸಂದೇಶದ ಕುರಿತು ಬಜರಂಗ್ ಪೂನಿಯಾ ಹರಿಯಾಣದ ಸೋನಿಪತ್ ಜಿಲ್ಲೆಯ ಬಹಲ್‌ಗಢ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದೇಶದ ನಂಬರ್ನಿಂದ ಬೆದರಿಕೆ ಸಂದೇಶ ಬಂದಿದೆ. ಇದು ಬಜರಂಗ್ ಪುನಿಯಾ ಅವರಿಗೆ ಕೊನೆಯ ಎಚ್ಚರಿಕೆ ಎಂದು ಅಪರಿಚಿತರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪೂನಿಯಾ ಅವರು ವಿನೇಶ್ ಫೋಗಟ್ ಅವರೊಂದಿಗೆ ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ನಂತರ ಫೋಗಟ್ ಅವರನ್ನು ಕಾಂಗ್ರೆಸ್ ಪಕ್ಷವು ಜೂಲಾನಾ ವಿಧಾನಸಭಾ ಕ್ಷೇತ್ರದಿಂದ ತನ್ನ ಅಭ್ಯರ್ಥಿಯಾಗಿ ಘೋಷಿಸಿತು. ಪುನಿಯಾ ಅವರನ್ನು ಪಕ್ಷದ ಕಿಸಾನ್ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News