×
Ad

ಐಸಿಐಸಿಐ ಬ್ಯಾಂಕ್‌ನಿಂದ ಸೆಬಿ ಮುಖ್ಯಸ್ಥೆ ಮಾಧಬಿ ಬುಚ್ ಸಂಬಳ ಪಡೆಯುತ್ತಿದ್ದಾರೆ: ಕಾಂಗ್ರೆಸ್ ಆರೋಪ

Update: 2024-09-02 12:43 IST

ಕಾಂಗ್ರೆಸ್ ನಾಯಕ ಪವನ್ ಖೇರಾ 

ಹೊಸದಿಲ್ಲಿ: ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಅಧ್ಯಕ್ಷೆ ಮಾಧಬಿ ಪುರಿ ಬುಚ್ ಸರ್ಕಾರದಿಂದ ಮಾತ್ರವಲ್ಲದೆ ಐಸಿಐಸಿಐ ಬ್ಯಾಂಕ್ ಮತ್ತು ಐಸಿಐಸಿಐ ಪ್ರುಡೆನ್ಶಿಯಲ್‌ನಿಂದ ಸಂಬಳ ಪಡೆಯುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಖೇರಾ, ಬುಚ್ ಐಸಿಐಸಿಐನಿಂದ ಸಂಬಳ ಪಡೆಯುತ್ತಿರುವುದರಿಂದ, ಬ್ಯಾಂಕ್ ಕುರಿತ ಹಲವಾರು ತನಿಖೆಗಳನ್ನು ಮುಚ್ಚಿಹಾಕಲಾಗಿದೆ ಎಂದು ಆರೋಪಿಸಿದರು.

ಪವನ್ ಖೇರಾ ಅವರು ಸೆಬಿ ಮುಖ್ಯಸ್ಥರು ರಾಜೀನಾಮೆ ನೀಡಿ ತಮ್ಮ ಮೇಲಿನ ಆರೋಪಗಳ ಬಗ್ಗೆ ಸ್ಪಷ್ಟೀಕರಣವನ್ನು ನೀಡಬೇಕೆಂದು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News