×
Ad

ಮತ್ತೆ 10 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್: ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಕನ್ಹಯ್ಯ ಕುಮಾರ್ ಕಣಕ್ಕೆ

Update: 2024-04-14 21:34 IST

ಕನ್ಹಯ್ಯ ಕುಮಾರ್ | PC : PTI

ಹೊಸ ದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಮತ್ತೆ ಹತ್ತು ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಜೆಎನ್‌ಯು ವಿದ್ಯಾರ್ಥಿ ಯೂನಿಯನ್‌ನ ಮಾಜಿ ಅಧ್ಯಕ್ಷ, ಎನ್‌ಎಸ್‌ಯುಐನ ಮುಖ್ಯಸ್ಥರಾದ ಕನ್ಹಯ್ಯ ಕುಮಾರ್ ಈಶಾನ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ವಾಯುವ್ಯ ದಿಲ್ಲಿ ಲೋಕಸಭಾ ಕ್ಷೇತ್ರದಿಂದ ಉದಿತ್ ರಾಜ್ ಸ್ಪರ್ಧಿಸಲಿದ್ದರೆ, ಚಾಂದಿನಿ ಚೌಕ್ ಲೋಕಸಭಾ ಕ್ಷೇತ್ರದಿಂದ ಜೆ.ಪಿ‌.ಅಗರ್ವಾಲ್ ಅಭ್ಯರ್ಥಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News