ಬಿಹಾರ ಚುನಾವಣೆಗೆ ಕಾಂಗ್ರೆಸ್‌ನಿಂದ ಹಿರಿಯ ವೀಕ್ಷಕರ ನೇಮಕ
ಅಧೀರ್ ರಂಜನ್ ಚೌಧರಿಗೆ ಸ್ಥಾನ
ಅಧೀರ್ ರಂಜನ್ ಚೌಧರಿ (PTI)
ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಪ್ರಮುಖ ನಾಯಕರನ್ನು ಹಿರಿಯ ವೀಕ್ಷಕರಾಗಿ ನೇಮಿಸಿದೆ.
ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಭೂಪೇಶ್ ಬಘೇಲ್ ಹಾಗೂ ಮಾಜಿ ಲೋಕಸಭೆ ಸಂಸದ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ನೇಮಕ ಮಾಡಲಾಗಿದೆ.
“ಬಿಹಾರ ವಿಧಾನಸಭಾ ಚುನಾವಣೆಗೆ ಜಿಲ್ಲಾ ಮಟ್ಟದ ಚುನಾವಣಾ ವೀಕ್ಷಕರ ನೇಮಕಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಬಿಹಾರದ ಪ್ರತಿಯೊಂದು ಜಿಲ್ಲೆಗೆ ಒಟ್ಟು 41 ನಾಯಕರನ್ನು ವೀಕ್ಷಕರಾಗಿ ನಿಯೋಜಿಸಲಾಗಿದ್ದು, ಸಂಘಟನೆ ಹಾಗೂ ಚುನಾವಣಾ ತಂತ್ರಗಾರಿಕೆಗೆ ಬಲ ನೀಡಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಸೋಲಿಸಲು ಕಾಂಗ್ರೆಸ್ ಅಖಾಡಕ್ಕಿಳಿದಿದೆ ಎಂದು ವಿಶ್ಲೇಷಿಸಲಾಗಿದೆ.