×
Ad

ರಾಜ್ಯಸಭಾ ಚುನಾವಣೆ | ತೆಲಂಗಾಣದಿಂದ ಅಭಿಷೇಕ್ ಮನು ಸಿಂಘ್ವಿಯನ್ನು ಕಣಕ್ಕಿಳಿಸಿದ ಕಾಂಗ್ರೆಸ್

Update: 2024-08-14 19:59 IST

Photo : PTI

ಹೈದರಾಬಾದ್ : ತೆಲಂಗಾಣದಿಂದ ರಾಜ್ಯಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರನ್ನು ಬುಧವಾರ ಕಾಂಗ್ರೆಸ್ ಕಣಕ್ಕಿಳಿಸಿದೆ.

ಭಾರತ್ ರಾಷ್ಟ್ರ ಸಮಿತಿಯ ಹಾಲಿ ರಾಜ್ಯಸಭಾ ಸದಸ್ಯ ಕೆ.ಕೇಶವ್ ರಾವ್ ಇತ್ತೀಚೆಗೆ ತಮ್ಮ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಅಭಿಷೇಕ್ ಮನು ಸಿಂಘ್ವಿ ಅವರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ.

ಈ ವರ್ಷದ ಆರಂಭದಲ್ಲಿ ಹಿಮಾಚಲ ಪ್ರದೇಶದಿಂದ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಕಾಂಗ್ರೆಸ್ ಶಾಸಕರು ಬಿಜೆಪಿ ಪರವಾಗಿ ಅಡ್ಡ ಮತದಾನ ಮಾಡಿದ್ದರಿಂದ ಅವರು ಆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಹಿಮಾಚಲ ಪ್ರದೇಶ ವಿಧಾನಸಭೆಯ 68 ಶಾಸಕ ಬಲದ ಪೈಕಿ, ಕಾಂಗ್ರೆಸ್ ಪಕ್ಷವು 40 ಶಾಸಕರ ಸ್ಪಷ್ಟ ಬಹುಮತ ಹೊಂದಿದ್ದರೂ, ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಅಭಿಷೇಕ್ ಮನು ಸಿಂಘ್ವಿ ಅವರು ಬಿಜೆಪಿಯ ಅಭ್ಯರ್ಥಿ ಹರ್ಷ್ ಮಹಾಜನ್ ಎದುರು ಪರಾಭವಗೊಂಡಿದ್ದರು.

ಸೆಪ್ಟೆಂಬರ್ 3ರಂದು ಒಂಭತ್ತು ರಾಜ್ಯಗಳಿಂದ ತೆರವಾಗಿರುವ 12 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಈ ಪೈಕಿ 10 ಮಂದಿ ಹಾಲಿ ರಾಜ್ಯಸಭಾ ಸದಸ್ಯರು ಲೋಕಸಭೆಗೆ ಆಯ್ಕೆಗೊಂಡಿದ್ದರಿಂದ, ಆ ಸ್ಥಾನಗಳು ಖಾಲಿ ಉಳಿದಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News