×
Ad

ಹಿಮಾಚಲ ಪ್ರದೇಶ| ಕಾಂಗ್ರೆಸ್‌ನಲ್ಲಿ ತೀವ್ರಗೊಂಡ ಬಿಕ್ಕಟ್ಟು; ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ ವೀರಭದ್ರ ಸಿಂಗ್ ಪುತ್ರ

Update: 2024-02-28 11:37 IST

Photo: ANI

ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್‌ನಲ್ಲಿನ ಬಿಕ್ಕಟ್ಟು ಮತ್ತಷ್ಟು ಉಲ್ಬಣಗೊಂಡಿದ್ದು, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಶಾಸಕರನ್ನು ನಿರ್ಲಕ್ಷಿಸುತ್ತಿದ್ದಾರೆ ಹಾಗೂ ಗಿರಿ ರಾಜ್ಯದ ಉನ್ನತ ನಾಯಕರಾದ ತನ್ನ ತಂದೆ ದಿ. ವೀರಭದ್ರ ಸಿಂಗ್ ಅವರಿಗೆ ಅಗೌರವ ತೋರುತ್ತಿದ್ದಾರೆ ಎಂದು ಆರೋಪಿಸಿ ಸಚಿವ ವಿಕ್ರಮಾದಿತ್ಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪರಾಭವಗೊಂಡ ನಂತರ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News