×
Ad

Kerala | ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್‌ ವಿರುದ್ಧ ಎರಡನೇ ಲೈಂಗಿಕ ದೌರ್ಜನ್ಯ ಪ್ರಕರಣ: ತನಿಖೆಗೆ SIT ರಚನೆ

Update: 2025-12-05 17:12 IST

ರಾಹುಲ್ ಮಾಂಕೂಟತ್ತಿಲ್‌ | Photo Credit : X 

ತಿರುವನಂತಪುರಂ: ಕಾಂಗ್ರೆಸ್ ಪಕ್ಷದ ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್‌ ವಿರುದ್ಧ ದಾಖಲಾಗಿರುವ ಎರಡನೆ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (SIT) ರಚಿಸಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

ಈ ತನಿಖೆಯ ನೇತೃತ್ವವನ್ನು ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕ ಜಿ.ಪೂಂಗುಳಲಿ ವಹಿಸಲಿದ್ದಾರೆ.

ಈ ತಂಡದಲ್ಲಿ ಉಪ ಪೊಲೀಸ್ ವರಷ್ಠಾಧಿಕಾರಿ ಹಾಗೂ ಸಬ್ ಇನ್ಸ್‌ಪೆಕ್ಟರ್ ದರ್ಜೆಯ ಪೊಲೀಸ್ ಅಧಿಕಾರಿಗಳೂ ಇರಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಉಚ್ಚಾಟಿತ ಶಾಸಕ ರಾಹುಲ್ ಮಾಂಕೂಟತ್ತಿಲ್‌ ವಿರುದ್ಧ ಎರಡನೆ ಲೈಂಗಿಕ ದೌರ್ಜನ್ಯದ ಆರೋಪವನ್ನು ಸ್ವೀಕರಿಸಿದ್ದ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ, ಆ ದೂರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ರವಾನಿಸಿತ್ತು. ಇದರ ಬೆನ್ನಿಗೇ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಚಾಲನೆ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News