×
Ad

ಅತ್ಯಾಚಾರ ಪ್ರಕರಣ : ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಉತ್ತರ ಪ್ರದೇಶದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಬಂಧನ

Update: 2025-01-30 15:42 IST

Photo credit: indiatoday.in

ಲಕ್ನೋ : ಮಹಿಳೆಯೋರ್ವರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಉತ್ತರಪ್ರದೇಶದ ಸೀತಾಪುರ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಉತ್ತರ ಪ್ರದೇಶ ಘಟಕದ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಥೋಡ್ ವಿರುದ್ಧ ಜನವರಿ 17ರಂದು ಮಹಿಳೆಯೋರ್ವರು ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. ತನ್ನನ್ನು ವಿವಾಹವಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳಿಂದ ಸಂಸದ ರಾಕೇಶ್ ರಾಥೋಡ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿದ್ದರು.

ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಈ ಕುರಿತು ನಿನ್ನೆಯಷ್ಠೇ ರಾಕೇಶ್ ರಾಥೋಡ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು ಮತ್ತು ಎರಡು ವಾರಗಳಲ್ಲಿ ಸೆಷನ್ಸ್ ಕೋರ್ಟ್ ಗೆ ಶರಣಾಗುವಂತೆ ಸೂಚಿಸಿತ್ತು. ಸೀತಾಪುರದ ತನ್ನ ನಿವಾಸದಲ್ಲಿ ರಾಥೋಡ್ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News