ಲೈಂಗಿಕ ಕಿರುಕುಳ ಆರೋಪ : ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು
Update: 2025-08-25 10:53 IST
Photo credit: thenewsminute.com
ತಿರುವನಂತಪುರಂ: ಲೈಂಗಿಕ ಕಿರುಕುಳದ ಆರೋಪದ ಬೆನ್ನಲ್ಲೇ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕಾಂಗ್ರೆಸ್ ಪಕ್ಷ ಸೋಮವಾರ ಆರು ತಿಂಗಳ ಕಾಲ ಪಕ್ಷದ ಸದಸ್ಯತ್ವದಿಂದ ಅಮಾನತುಗೊಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ತಿರುವಂಚೂರು ರಾಧಾಕೃಷ್ಣನ್, ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲು ರವಿವಾರ ಸಭೆ ನಡೆಸಲಾಗಿದೆ. ರಾಹುಲ್ ಮಾಂಕೂಟತ್ತಿಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ನಿರ್ಧರಿಸಲಾಗಿದೆ. ಪಕ್ಷದ ನಾಯಕತ್ವವು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಈ ಮೊದಲೇ ಹೇಳಿತ್ತು ಎಂದು ಹೇಳಿದ್ದಾರೆ.
ಇದಲ್ಲದೆ ಅನುಚಿತ ವರ್ತನೆಯ ಆರೋಪಗಳಿಗೆ ಸಂಬಂಧಿಸಿದಂತೆ ರಾಹುಲ್ ಮಾಂಕೂಟತ್ತಿಲ್ ಅವರಿಂದ ಕಾಂಗ್ರೆಸ್ ಪಕ್ಷವು ವಿವರಣೆಯನ್ನು ಪಡೆಯಲಿದೆ ಎಂದು ತಿಳಿದು ಬಂದಿದೆ.