×
Ad

‘VB-G RAM G’ ಯೋಜನೆಯ ವಿರುದ್ಧ ನಾಳೆ(ಡಿ.17)ರಿಂದ ಕಾಂಗ್ರೆಸ್ ನಿಂದ ದೇಶಾದ್ಯಂತ ಪ್ರತಿಭಟನೆ

Update: 2025-12-16 23:37 IST

ಸಾಂದರ್ಭಿಕ ಚಿತ್ರ | Photo Credit : PTI

ಹೊಸದಿಲ್ಲಿ, ಡಿ. 16: MGNREGAದ ಸ್ಥಾನದಲ್ಲಿ ತರಲು ಕೇಂದ್ರ ಸರಕಾರ ಉದ್ದೇಶಿಸಿರುವ ಗ್ರಾಮೀಣ ಉದ್ಯೋಗ ಮಸೂದೆ ವಿಬಿ- ಜಿ ರಾಮ್ ಜಿ ವಿರುದ್ಧ ಬುಧವಾರ ದೇಶಾದ್ಯಂತ ಪ್ರತಿಭಟನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ಇದು ಹಕ್ಕು-ಆಧಾರಿತ ಕಲ್ಯಾಣ ಯೋಜನೆಯೊಂದನ್ನು ಕೆಡವಲು, ಮಹಾತ್ಮಾ ಗಾಂಧಿಯ ಪರಂಪರೆಯನ್ನು ಅಳಿಸಿಹಾಕಲು ಹಾಗೂ ಕಾರ್ಮಿಕರ ಹಕ್ಕುಗಳು ಮತ್ತು ಕೇಂದ್ರ ಸರಕಾರದ ಜವಾಬ್ದಾರಿಯನ್ನು ತೊಡೆದುಹಾಕಲು ಬಿಜೆಪಿ-RSS ನಡೆಸಿರುವ ಪಿತೂರಿಯಾಗಿದೆ ಎಂದು ಅದು ಆರೋಪಿಸಿದೆ.

ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ಏರ್ಪಡಿಸುವಂತೆ ಎಲ್ಲಾ ರಾಜ್ಯ ಕಾಂಗ್ರೆಸ್ ಘಟಕಗಳ ಅಧ್ಯಕ್ಷರುಗಳಿಗೆ ಬರೆದ ಪತ್ರವೊಂದರಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News