×
Ad

ಅದಾನಿ ವಿರುದ್ಧ ದೋಷಾರೋಪಣೆ: ಸಂಸತ್ತಿನಲ್ಲಿ ಸಂವಿಧಾನದ ಪ್ರತಿ ಹಿಡಿದು ರಾಹುಲ್, ಪ್ರಿಯಾಂಕ ಗಾಂಧಿ ಸೇರಿದಂತೆ ವಿಪಕ್ಷಗಳ ಸಂಸದರಿಂದ ಪ್ರತಿಭಟನೆ

Update: 2024-12-06 16:13 IST

Photo credit: X/@INCIndia

ಹೊಸದಿಲ್ಲಿ: ಅಮೆರಿಕದಲ್ಲಿ ಗೌತಮ್ ಅದಾನಿ ವಿರುದ್ಧ ದೋಷಾರೋಪಣೆ ವಿಚಾರಕ್ಕೆ ಸಂಬಂಧಿಸಿ ಚರ್ಚೆಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಇತರ ವಿರೋಧ ಪಕ್ಷದ ಸಂಸದರು ಶುಕ್ರವಾರ ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಕೆಲವು ವಿರೋಧ ಪಕ್ಷದ ಸಂಸದರು ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದುಕೊಂಡಿದ್ದಲ್ಲದೆ, "ಮೋದಿ-ಅದಾನಿ ಭಾಯಿ ಭಾಯಿ("Modi-Adani bhai bhai)" ಎಂದು ಬರೆದಿರುವ ಮಾಸ್ಕ್ ನ್ನು ಧರಿಸಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ನನ್ನ ಸಹೋದರ ರಾಹುಲ್ ಗಾಂಧಿ ಬಗ್ಗೆ ನನಗೆ ಹೆಮ್ಮೆ ಇದೆ. ಅವರಿಗೆ ಈ ದೇಶಕ್ಕಿಂತ ಬೇರೆ ಯಾವುದೂ ಮುಖ್ಯವಲ್ಲ, ಅವರು ಈ ದೇಶದ ಏಕತೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ 4,000 ಕಿ.ಮೀ. ಪಾದಯಾತ್ರೆ ಮಾಡಿದ್ದಾರೆ. ಅವರು ಏನು ಬೇಕಾದರೂ ಹೇಳಲಿ, ಅದಾನಿ ವಿಚಾರದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಅವರಿಗೆ ಧೈರ್ಯವಿಲ್ಲ, ಚರ್ಚೆಸಲು ಇವರಿಗೆ ಸಮಸ್ಯೆ ಏನಿದೆ? ಚರ್ಚೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ನಡೆಯುತ್ತದೆ ಎಂದು ಪ್ರಿಯಾಂಕ ಗಾಂಧಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News