×
Ad

ಜ್ಞಾನವಾಪಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲಮಹಡಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಕಲ್ಪಿಸಿದ ನ್ಯಾಯಾಲಯ

Update: 2024-01-31 15:44 IST

ವಾರಣಾಸಿ: ಜ್ಞಾನವಾಪಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಬುಧವಾರ ವಾರಣಾಸಿಯ ನ್ಯಾಯಾಲಯವೊಂದು ಅವಕಾಶ ಕಲ್ಪಿಸಿದೆ ಎಂದು indiatoday.in ವರದಿ ಮಾಡಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ.

ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News