ಸಿ.ಪಿ.ರಾಧಾಕೃಷ್ಣನ್ ರಾಜೀನಾಮೆ : ಗುಜರಾತ್ ರಾಜ್ಯಪಾಲ ದೇವವ್ರತರಿಗೆ ಮಹಾರಾಷ್ಟ್ರದ ಹೆಚ್ಚುವರಿ ಹೊಣೆಗಾರಿಕೆ
Update: 2025-09-11 22:47 IST
ಸಿ.ಪಿ.ರಾಧಾಕೃಷ್ಣನ್ | PC : PTI
ಹೊಸದಿಲ್ಲಿ,ಸೆ.11: ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಗುರುವಾರ ತನ್ನ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ ಅವರಿಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿದ್ದಾರೆ ಎಂದು ರಾಷ್ಟ್ರಪತಿಗಳ ಕಚೇರಿಯು ಹೇಳಿಕೆಯಲ್ಲಿ ತಿಳಿಸಿದೆ.
ಸೆ.9ರಂದು ನಡೆದಿದ್ದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿದ್ದ ಸಿ.ಪಿ.ರಾಧಾಕೃಷ್ಣನ್ ಅವರು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿಯವರನ್ನು 452-300 ಮತಗಳಿಂದ ಸೋಲಿಸಿ ಆಯ್ಕೆಯಾಗಿದ್ದರು.
ಮಾಜಿ ಉಪರಾಷ್ಟ್ರಪತಿ ಜಗದೀಪ ಧನ್ಕರ್ ಅವರು ಜು.21ರಂದು ತನ್ನ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದರಿಂದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆದಿತ್ತು.