×
Ad

ಮಣಿಪುರ: ಮೂರು ಜಿಲ್ಲೆಗಳಲ್ಲಿ ಮತ್ತೆ ಕರ್ಫ್ಯೂ ಹೇರಿಕೆ

Update: 2024-09-10 14:29 IST

Photo: PTI

ಮಣಿಪುರ: ಡ್ರೋನ್, ರಾಕೆಟ್ ದಾಳಿಗಳ ಮಧ್ಯೆ ಮಣಿಪುರದ ಮೂರು ಜಿಲ್ಲೆಗಳಲ್ಲಿ ಇಂದು ಕರ್ಫ್ಯೂ ವಿಧಿಸಲಾಗಿದೆ.

ಮಣಿಪುರದಲ್ಲಿ ಹಿಂಸಾಚಾರದ ಘಟನೆಗಳು ಮತ್ತು ಪ್ರತಿಭಟನೆಗಳು ಪ್ರಕ್ಷುಬ್ಧತೆಯನ್ನು ಮತ್ತೆ ಹೆಚ್ಚಿಸಿವೆ. ರಾಜ್ಯದಲ್ಲಿ ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ ಮತ್ತು ತೌಬಲ್ ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಗಿದೆ.

ಹಿಂದಿನ ಆದೇಶದಲ್ಲಿ, ಇಂಫಾಲ್ ಪೂರ್ವ ಮತ್ತು ಇಂಫಾಲ್ ಪಶ್ಚಿಮದ ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು ಜಿಲ್ಲೆಗಳಲ್ಲಿ ಮಂಗಳವಾರ ಬೆಳಿಗ್ಗೆ 5 ರಿಂದ 10 ರವರೆಗೆ ಕರ್ಫ್ಯೂ ಸಡಿಲಿಸುವುದಾಗಿ ಘೋಷಿಸಿದ್ದರು. ಆದರೆ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಕಾರಣ ಮಂಗಳವಾರ ಬೆಳಿಗ್ಗೆ 11 ಗಂಟೆಯಿಂದ ಕರ್ಪ್ಯೂ ಸಡಿಲಿಕೆ ಆದೇಶವನ್ನು ರದ್ದುಗೊಳಿಸಲಾಗಿದೆ ಮತ್ತು ಎರಡೂ ಜಿಲ್ಲೆಗಳಲ್ಲಿ ಕರ್ಫ್ಯೂ ಮರು ಹೇರಲಾಗಿದೆ.

ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿತ್ತು. ಸೆಪ್ಟೆಂಬರ್ 6ರಂದು ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ ನಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಓರ್ವ ಮೃತಪಟ್ಟಿದ್ದ. ಸೆಪ್ಟೆಂಬರ್ 7 ರಂದು ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಕುಕಿ ಗುಂಪು ನಡೆಸಿದೆ ಎನ್ನಲಾದ ರಾಕೆಟ್ ದಾಳಿಗೆ ಐವರು ಮೃತಪಟ್ಟಿದ್ದರು. ಇದರ ಬೆನ್ನಲ್ಲಿ ರಾಜ್ಯಾದ್ಯಂತ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News