ಶಾಲಾ ಕೊಠಡಿಯಲ್ಲಿ ದಲಿತ ಬಾಲಕ ಆತ್ಮಹತ್ಯೆ ಪ್ರಕರಣ: ರಾಜಸ್ಥಾನದ ಇಬ್ಬರು ಶಿಕ್ಷಕರ ಅಮಾನತು
Photo: Twitter@NDTV
ಜೈಪುರ: ರಾಜಸ್ಥಾನದ ಕೊಟ್ ಪುಟ್ಲಿಯ ಸರಕಾರಿ ಶಾಲೆಯಲ್ಲಿ 15 ವರ್ಷದ ದಲಿತ ಬಾಲಕ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ.
ಶಾಲೆಯ ಹಾಸ್ಟೆಲ್ ನಲ್ಲಿ ವಾಸವಿದ್ದ ವಿದ್ಯಾರ್ಥಿಯು ತರಗತಿ ಕೊಠಡಿಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಬಾಲಕನಿಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.
ಪೊಲೀಸರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಬ್ಬರು ಶಿಕ್ಷಕರಿಂದ ಕಿರುಕುಳ ಎದುರಿಸುತ್ತಿರುವ ಬಗ್ಗೆ ಬಾಲಕನು ತನ್ನ ತಂದೆಗೆ ತಿಳಿಸಿದ್ದಾನೆ ಎಂದು ಪ್ರಥಮ ಮಾಹಿತಿ ವರದಿ ಅಥವಾ ಎಫ್ಐಆರ್ ಹೇಳಿದೆ, ಆದರೆ ಪ್ರಾಂಶುಪಾಲರು ಹಾಗೂ ಉಪ ಪ್ರಾಂಶುಪಾಲರು ಅವರ ವಿರುದ್ಧ ಕ್ರಮ ಕೈಗೊಂಡಿರಲಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡುವ ಭರವಸೆ ನೀಡಿದ ಬಳಿಕ ಕುಟುಂಬಸ್ಥರು ಹಾಗೂ ಸ್ಥಳೀಯರು ಪ್ರತಿಭಟನೆ ಹಿಂಪಡೆದರು.