×
Ad

ಗೆಳೆಯನ ಎದುರೇ ದಲಿತ ಬಾಲಕಿಯನ್ನು ಅತ್ಯಾಚಾರಗೈದ ಮೂವರು ಕಾಲೇಜು ವಿದ್ಯಾರ್ಥಿಗಳು: ಆರೋಪಿಗಳ ಬಂಧನ

Update: 2023-07-17 16:36 IST

ಬಂಧಿತ ಆರೋಪಿಗಳು (Photo : PTI )

ಜೋಧಪುರ/ಜೈಪುರ: 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಆಕೆಯ ಗೆಳೆಯನ ಎದುರೇ ಮೂವರು ಕಾಲೇಜು ವಿದ್ಯಾರ್ಥಿಗಳು ಅತ್ಯಾಚಾರಗೈದಿರುವ ಘಟನೆ ರವಿವಾರ ಮುಂಜಾನೆ ರಾಜಸ್ಥಾನದ ಜೋಧಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯ ಅತ್ಯಾಚಾರ ನಡೆಸುವ ಮುನ್ನ ಮೂವರು ಆರೋಪಿಗಳು ಆಕೆಯ ಗೆಳೆಯನನ್ನು ಥಳಿಸಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿ ಸಂಘಟನೆಯ ಚುನಾವಣೆಯಲ್ಲಿ ಆರೆಸ್ಸೆಸ್ ನ ವಿದ್ಯಾರ್ಥಿ ಘಟಕವಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಟಿಕೆಟ್ ಆಕಾಂಕ್ಷಿಯಾಗಿದ್ದ ವಿದ್ಯಾರ್ಥಿ ನಾಯಕನೊಬ್ಬನ ಪರವಾಗಿ ಆರೋಪಿಗಳು ಪ್ರಚಾರ ನಡೆಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಆರೋಪಿಗಳೊಂದಿಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಎಬಿವಿಪಿ ಸ್ಪಷ್ಟಪಡಿಸಿದೆ.

ತಮ್ಮ ತವರು ಪಟ್ಟಣವಾದ ಜೋಧಪುರದಲ್ಲಿ ನಡೆದಿರುವ ಈ ಘಟನೆಯ ಕುರಿತು ಪೊಲೀಸ್ ಮಹಾನಿರ್ದೇಶಕ ಉಮೇಶ್ ಮಿಶ್ರಾರೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವುದನ್ನು ಖಾತರಿ ಪಡಿಸಬೇಕು ಎಂದು ಸೂಚಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೆಹ್ಲೋಟ್, ಆರೋಪಿಗಳನ್ನು ಬಂಧಿಸಿರುವ ಪೊಲೀಸರ ಕ್ರಮ ಶ್ಲಾಘನೀಯ. ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ಕೊಡಿಸುವ ಮೂಲಕ ನಮ್ಮ ಸರ್ಕಾರವು ಸಂತ್ರಸ್ತೆಗೆ ನ್ಯಾಯ ದೊರೆಯುವುದನ್ನು ಖಚಿತ ಪಡಿಸಲಿದೆ ಎಂದು ಭರವಸೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News