×
Ad

ಉತ್ತರಪ್ರದೇಶ: ಅಂಬೇಡ್ಕರ್ ಫೋಟೋ ಸ್ಟೇಟಸ್ ಹಾಕಿದ್ದಕ್ಕೆ 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನ ಮೇಲೆ ಹಲ್ಲೆ

Update: 2024-10-21 11:13 IST

ಸಾಂದರ್ಭಿಕ ಚಿತ್ರ (PTI)

ಉತ್ತರಪ್ರದೇಶ: 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಒತ್ತಾಯಿಸಿ ದಲಿತ ಬಾಲಕನ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿಡಿಯೋ ವೈರಲ್ ಆಗಿದ್ದು, ಆರೋಪಿತ ವಿದ್ಯಾರ್ಥಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ ಐಆರ್ ದಾಖಲಿಸಲಾಗಿದೆ.

ಘಾಟಂಪುರ ಎಸಿಪಿ ರಂಜಿತ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದಲಿತ ಸಮುದಾಯಕ್ಕೆ ಸೇರಿದ ಬಾಲಕ ತನ್ನ ಇನ್ಸ್ಟಾಗ್ರಾಂ ಸ್ಟೇಟಸ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋ ಹಾಕಿದ್ದಕ್ಕೆ ವಿದ್ಯಾರ್ಥಿಗಳ ಗುಂಪು ಆತನ ಮೇಲೆ ಹಲ್ಲೆ ನಡೆಸಿ 'ಜೈ ಶ್ರೀ ರಾಮ್' ಘೋಷಣೆ ಕೂಗುವಂತೆ ಬಲವಂತ ಮಾಡಿದೆ. ಇದಲ್ಲದೆ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ಕುರಿತು ತನಿಖೆ ನಡೆಸಲಾಗಿದ್ದು. ಈವರೆಗೆ ಯಾವುದೇ ಬಂಧನ ನಡೆದಿಲ್ಲ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News