ಗುಜರಾತ್: ಏರ್ ಇಂಡಿಯಾ ವಿಮಾನ ಪತನದಲ್ಲಿ ಕನಿಷ್ಠ 133 ಮಂದಿ ಮೃತ್ಯು
Update: 2025-06-12 17:05 IST
Photo credit: PTI
ಅಹ್ಮದಾಬಾದ್ : ಗುಜರಾತ್‌ನ ಅಹ್ಮದಾಬಾದ್ ಬಳಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಪತನದಲ್ಲಿ ಕನಿಷ್ಠ 133 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.
232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತ ಏರ್ ಇಂಡಿಯಾ ವಿಮಾನ ಅಹ್ಮದಾಬಾದ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, 7 ಮಂದಿ ಪೋರ್ಚುಗೀಸರು ಮತ್ತು ಓರ್ವ ಕೆನಡಾದ ಪ್ರಯಾಣಿಕ ಇದ್ದರು.