ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಿಂದ ಭದ್ರತಾ ಪರಿಸ್ಥಿತಿ ಪರಿಶೀಲನೆ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ | PC : PTI
ಹೊಸದಿಲ್ಲಿ: ಭದ್ರತಾ ಪರಿಸ್ಥಿತಿ ಪರಿಶೀಲಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೇನೆಯ ಉನ್ನತ ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿದ್ದಾರೆ.
ಭಾರತ ಹಾಗೂ ಪಾಕಿಸ್ತಾನದ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರು (ಡಿಜಿಎಂಒ) ಹಾಟ್‌ಲೈನ್ ಮೂಲಕ ಮಾತುಕತೆ ನಡೆಸಿದ, ಒಂದೇ ಒಂದು ಗುಂಡು ಹಾರಿಸಬಾರದು ಅಥವಾ ಯಾವುದೇ ಆಕ್ರಮಣಕಾರಿ ಅಥವಾ ದ್ವೇಷಪೂರಿತ ಕ್ರಮವನ್ನು ಆರಂಭಿಸಬಾರದು ಎಂದು ಖಾತರಿಪಡಿಸುವ ತಮ್ಮ ಬದ್ಧತೆಯನ್ನು ಎರಡೂ ಕಡೆಯವರು ಒತ್ತಿ ಹೇಳಿದ ಒಂದು ದಿನದ ಬಳಿಕ ಈ ಸಭೆ ನಡೆದಿದೆ.
ಈ ಸಭೆಯಲ್ಲಿ ಪಶ್ಚಿಮ ಮುಂಚೂಣಿ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿ ಹಾಗೂ ಸಂಬಂಧಿತ ವಿಷಯಗಳ ಕುರಿತು ಪರಿಶೀಲನೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿ ರಕ್ಷಣಾ ಸಿಬ್ಬಂದಿಯ ವರಿಷ್ಠ ಜನರಲ್ ಅನಿಲ್ ಚೌಹಾನ್, ಸೇನಾ ವರಿಷ್ಠ ಜನರಲ್ ಉಪೇಂದ್ರ ದ್ವಿವೇದಿ, ನೌಕಾ ಪಡೆಯ ವರಿಷ್ಮ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಹಾಗೂ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಪಾಲ್ಗೊಂಡಿದ್ದರು.