ಪ್ರಧಾನಿಯಿಂದ ರಕ್ಷಣಾ ಕಾರ್ಯದರ್ಶಿಯ ಭೇಟಿ
Update: 2025-05-05 21:53 IST
ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತಂತೆ ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.
ಅವರ ಸಭೆ ಅರ್ಧ ಗಂಟೆಗೂ ಅಧಿಕ ಕಾಲ ನಡೆಯಿತು ಎಂದು ವರದಿಯಾಗಿದೆ.
ಎಪ್ರಿಲ್ 22ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಮಂದಿ ಸಾವನ್ನಪ್ಪಿದ ಬಳಿಕ ಭಾರತದದಿಂದ ಪ್ರತೀಕಾರದ ದಾಳಿಯ ಸಾಧ್ಯತೆ ಕುರಿತು ಮಾಧ್ಯಮಗಳ ಊಹಾಪೋಹದ ವರದಿಯ ನಡುವೆ ಈ ಸಭೆ ನಡೆದಿದೆ.
ವಾಯು ಪಡೆ ಸಿಬ್ಬಂದಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ರವಿವಾರ ಪ್ರಧಾನಿ ಅವರನ್ನು ಭೇಟಿಯಾಗಿದ್ದರು. ಈ ಭೇಟಿ ಸಂದರ್ಭ ಭದ್ರತಾ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.