×
Ad

ಐಫೋನ್‌ ಮಾರಾಟ ವೇಳೆ ವಿಳಂಬ: ಅಂಗಡಿ ನೌಕರರಿಗೆ ಗ್ರಾಹಕರಿಂದ ಥಳಿತ

Update: 2023-09-23 22:52 IST

                                                                            Photo: ANI 

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯ ಕಮಲಾನಗರ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರ ಉದ್ಯೋಗಿಗಳು ಹಾಗೂ ಗ್ರಾಹಕರ ನಡುವೆ ಮಾರಾಮಾರಿ ನಡೆದಿದೆ.

ಐಫೋನ್ 15 ಮಾರಾಟದಲ್ಲಿ ವಿಳಂಬವಾಗಿದೆ ಎಂದು ಗ್ರಾಹಕರು ಅಂಗಡಿಯ ಉದ್ಯೋಗಿಗಳಿಗೆ ಥಳಿಸಿದ್ದಾರೆ ಎನ್ನಲಾಗಿದೆ. ದಿಲ್ಲಿ ಪೊಲೀಸರು ಗ್ರಾಹಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜಗಳದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗ್ರಾಹಕರು ನೌಕರರನ್ನು ಥಳಿಸುತ್ತಿರುವ ದೃಶ್ಯ ಕಂಡು ಬಂದಿದೆ. ಆಪಲ್ ಇತ್ತೀಚೆಗೆ ಬಿಡುಗಡೆ ಮಾಡಿದ ಐಫೋನ್ 15 ಸರಣಿಯ ಖರೀದಿಗೆ ಅಂಗಡಿಗಳ ಎದುರು ಗ್ರಾಹಕರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News