×
Ad

ದಿಲ್ಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ: ಮಾಲಿನ್ಯ ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಇಂಧನ ನಿಷೇಧ, ಹಳೆ ವಾಹನಗಳ ಪ್ರವೇಶಕ್ಕೂ ನಿರ್ಬಂಧ

Update: 2025-12-18 10:25 IST

ಸಾಂದರ್ಭಿಕ ಚಿತ್ರ (Image by freepik)

ಹೊಸದಿಲ್ಲಿ: ದಿಲ್ಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳದ ಹಿನ್ನೆಲೆ ಸರಕಾರ ಕಠಿಣ ನಿಯಮಗಳನ್ನು ಅಳವಡಿಸಿಕೊಂಡಿದೆ. ಬಿಎಸ್-4 ಎಂಜಿನ್ ಹೊಂದಿರದ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದ್ದು, ಮಾಲಿನ್ಯ ಪ್ರಮಾಣಪತ್ರವಿಲ್ಲದ ವಾಹನಗಳಿಗೆ ಪೆಟ್ರೋಲ್, ಡಿಸೇಲ್ ಸೇರಿದಂತೆ ಇಂಧನವನ್ನು ನಿಷೇಧಿಸಲಾಗಿದೆ.

ದಿಲ್ಲಿಯಾದ್ಯಂತ ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಇಂಧನ ಕೇಂದ್ರಗಳಲ್ಲಿ ಮಾಲಿನ್ಯ ನಿಯಂತ್ರಣ (ಪಿಯುಸಿ) ಪ್ರಮಾಣಪತ್ರಗಳನ್ನು ಹೊಂದಿರದ ವಾಹನಗಳಿಗೆ ಇಂಧನ ನೀಡುವುದನ್ನು ನಿಲ್ಲಿಸಲಾಗಿದೆ. ಪೆಟ್ರೋಲ್ ಪಂಪ್‌ಗಳಲ್ಲಿ ಧ್ವನಿ ವ್ಯವಸ್ಥೆ ಮೂಲಕ ಈ ಕುರಿತು ಮಾಹಿತಿ ನೀಡಲಾಗುತ್ತಿದೆ.

ಹೊಸ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ದೃಷ್ಠಿಯಿಂದ ಪ್ರಮುಖ ಗಡಿ ಪ್ರದೇಶಗಳು ಸೇರಿದಂತೆ 126 ಚೆಕ್‌ಪೋಸ್ಟ್‌ಗಳಲ್ಲಿ 580 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದಲ್ಲದೆ, ನಿಯಮ ಉಲ್ಲಂಘನೆ ಬಗ್ಗೆ ಮೇಲ್ವಿಚಾರಣೆ ಮಾಡಲು ಮತ್ತು ನಿಯಮ ಪಾಲಿಸದ ವಾಹನಗಳ ವಿರುದ್ಧ ಕ್ರಮವನ್ನು ಕೈಗೊಳ್ಳಲು ಸಾರಿಗೆ ಇಲಾಖೆಯ ತಂಡಗಳನ್ನು ಪೆಟ್ರೋಲ್ ಪಂಪ್‌ಗಳು ಮತ್ತು ಗಡಿ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News