×
Ad

ದಿಲ್ಲಿ ವಿಮಾನ ನಿಲ್ದಾಣದ ಎಟಿಸಿ ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ : 100ಕ್ಕೂ ಅಧಿಕ ವಿಮಾನಗಳ ಹಾರಾಟ ವಿಳಂಬ

Update: 2025-11-07 11:32 IST

ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ದಿಲ್ಲಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್(ಎಟಿಸಿ) ವ್ಯವಸ್ಥೆಯಲ್ಲಿನ ತಾಂತ್ರಿಕ ದೋಷದಿಂದಾಗಿ ನೂರಕ್ಕೂ ಅಧಿಕ ವಿಮಾನಗಳ ಹಾರಾಟ ವಿಳಂಬವಾಗಿರುವ ಬಗ್ಗೆ ವರದಿಯಾಗಿದೆ.

ಏರ್ ಟ್ರಾಫಿಕ್ ಕಂಟ್ರೋಲರ್(ಎಟಿಸಿ) ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಕಾರ್ಯಾಚರಣೆಗಳು ವಿಳಂಬವಾಗಿವೆ. ಉದ್ಭವಿಸಿರುವ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಗಳು ಮುಂದುವರಿದಿವೆ. ಪ್ರಯಾಣಿಕರು ತಮ್ಮ ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿರಿ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್ ಟ್ರಾಫಿಕ್ ಕಂಟ್ರೋಲ್‌ನಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನಗಳ ಹಾರಟಕ್ಕೆ ಅಡಚಣೆಯಾಗಿವೆ. ತಾಂತ್ರಿಕ ತಂಡಗಳು ಸಮಸ್ಯೆಯನ್ನು ಪರಿಹರಿಸಲು ಕಾರ್ಯ ನಿರತವಾಗಿದೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News