×
Ad

ಜ.1 ರವರೆಗೆ ಪಟಾಕಿ ಉತ್ಪಾದನೆ, ಮಾರಾಟ ನಿಷೇಧಿಸಿದ ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿ

Update: 2024-10-14 13:23 IST

ಸಾಂದರ್ಭಿಕ ಚಿತ್ರ (credit: Meta AI)

ಹೊಸದಿಲ್ಲಿ: ದಿಲ್ಲಿಯ ಎನ್ಸಿಟಿ ಪ್ರಾಂತ್ಯದಲ್ಲಿ ಜನವರಿ 1, 2025ರವರೆಗೆ ಎಲ್ಲ ಬಗೆಯ ಪಟಾಕಿಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಿ ಸೋಮವಾರ ದಿಲ್ಲಿ ವಾಯು ನಿಯಂತ್ರಣ ಸಮಿತಿ ಆದೇಶ ಹೊರಡಿಸಿದೆ. ಪಟಾಕಿಗಳ ಆನ್ ಲೈನ್ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಅಲ್ಲದೆ ಎಲ್ಲ ಬಗೆಯ ಪಟಾಕಿ ಸಿಡಿಸುವುದನ್ನೂ ನಿಷೇಧಿಸಲಾಗಿದೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಆದೇಶವನ್ನು ಜಾರಿಗೊಳಿಸುವಂತೆ ದಿಲ್ಲಿ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News