×
Ad

ದಿಲ್ಲಿ ಸ್ಫೋಟ ಪ್ರಕರಣ | ಆರೋಪಿಯನ್ನು 10 ದಿನ ಎನ್‌ಐಎ ಕಸ್ಟಡಿಗೆ ನೀಡಿದ ದಿಲ್ಲಿ ನ್ಯಾಯಾಲಯ

Update: 2025-11-17 21:15 IST

Photo Credit : PTI 

ಹೊಸದಿಲ್ಲಿ, ನ. 17: ದಿಲ್ಲಿಯ ಕೆಂಪು ಕೋಟೆ ಸಮೀಪ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ಆರೋಪಿಯಾಗಿರುವ ಅಮೀರ್ ರಶೀದ್ ಅಲಿಯನ್ನು ದಿಲ್ಲಿ ನ್ಯಾಯಾಲಯ ಸೋಮವಾರ 10 ದಿನ ಎನ್‌ಐಎ ಕಸ್ಟಡಿಗೆ ನೀಡಿದೆ.

ಬಿಗಿ ಭದ್ರತೆಯ ನಡುವೆ ಆರೋಪಿಯನ್ನು ಪಟಿಯಾಲ ಹೌಸ್ ಕೋರ್ಟ್ ಸಂಕೀರ್ಣದಲ್ಲಿರುವ ಪ್ರಾಥಮಿಕ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

‘‘ನ್ಯಾಯಾಲಯ ಸಂಕೀರ್ಣದ ಸುತ್ತಮುತ್ತ ದಿಲ್ಲಿ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯ ಪಡೆ (ಆರ್‌ಎಎಫ್)ಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು’’ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಗಲಭೆ ನಿಗ್ರಹ ತಂಡಗಳನ್ನು ಕೂಡ ನೇಮಿಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರವಿವಾರ ಬಂಧಿಸಿದೆ. ಕೆಂಪು ಕೋಟೆ ಸಮೀಪ ಸ್ಫೋಟಗೊಂಡ ಹುಂಡೈ ಐ 20 ಕಾರು ಈತನ ಹೆಸರಿನಲ್ಲಿ ನೋಂದಣಿಯಾಗಿದೆ.

ದಿಲ್ಲಿಯ ಕೆಂಪು ಕೋಟೆ ಸಮೀಪ ಸ್ಫೋಟಕ ತುಂಬಿದ್ದ ಕಾರು ನವೆಂಬರ್ 10ರಂದು ಸ್ಫೋಟಗೊಂಡು 13 ಮಂದಿ ಸಾವನ್ನಪ್ಪಿದ್ದರು ಹಾಗೂ ಹಲವರು ಗಾಯಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News