×
Ad

ದಿಲ್ಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ: ಹಾಂಗ್‌ ಕಾಂಗ್‌ ಗೆ ವಾಪಸ್

Update: 2025-06-16 14:55 IST

ಸಾಂದರ್ಭಿಕ ಚಿತ್ರ (PTI)

ಮುಂಬೈ: ಹಾಂಗ್‌ಕಾಂಗ್‌ನಿಂದ ದಿಲ್ಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಹಾಂಗ್‌ಕಾಂಗ್‌ ವಿಮಾನ ನಿಲ್ದಾಣಕ್ಕೆ ವಾಪಸಾದ ಘಟನೆ ಸೋಮವಾರ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಹಾಂಗ್ ಕಾಂಗ್ ನಿಂದ ಟೇಕ್ ಆಫ್ ಆದ ಬಳಿಕ

ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿರುವ ಬಗ್ಗೆ ಪೈಲಟ್ ಅನುಮಾನ ವ್ಯಕ್ತಪಡಿಸಿದ್ದರು. ಕೂಡಲೇ ವಿಮಾನವು ಹಾಂಗ್‌ಕಾಂಗ್‌ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು. ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಎಂದು ತಿಳಿದುಬಂದಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ವಿಮಾನವನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನವು ಹಾಂಗ್‌ ಕಾಂಗ್‌ನಿಂದ ಬೆಳಿಗ್ಗೆ 9.50ಕ್ಕೆ ಹೊರಟು ಮಧ್ಯಾಹ್ನ 12.20ಕ್ಕೆ ಇಲ್ಲಿಗೆ ಬಂದಿಳಿಯಬೇಕಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News