×
Ad

ದಿಲ್ಲಿ ಸಿಎಂ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗದ್ದಲ ಸೃಷ್ಟಿಸಿದ ವ್ಯಕ್ತಿಯ ಬಂಧನ

ರೇಖಾ ಗುಪ್ತಾ ಅವರ ಮೇಲೆ ಹಲ್ಲೆ ಬೆನ್ನಲ್ಲೆ ನಡೆದ ಮತ್ತೊಂದು ಘಟನೆ

Update: 2025-08-22 16:35 IST

 ರೇಖಾ ಗುಪ್ತಾ | PC : PTI 

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಕಾರ್ಯಮದಲ್ಲಿ ಘೋಷಣೆಗಳನ್ನು ಕೂಗಿ ಗದ್ದಲ ಸೃಷ್ಟಿಸಿದ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಿಲ್ಲಿ ಸಿಎಂ ಮೇಲೆ ಹಲ್ಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಸಂಭವಿಸಿದೆ.

ದಿಲ್ಲಿಯ ಗಾಂಧಿ ನಗರದ ನಿವಾಸಿ ಪ್ರವೀಣ್ ಶರ್ಮಾ (60) ಕೇಬಲ್ ವ್ಯವಹಾರ ನಡೆಸುತ್ತಿದ್ದರು. ಇವರು ಕಳೆದ 40 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಂಡಿದ್ದಾರೆ.

ಶಾಸಕ ಅರವಿಂದರ್ ಸಿಂಗ್ ಲವ್ಲಿ ಮಾತನಾಡುತ್ತಿದ್ದಾಗ ಅವರ ವಿರುದ್ಧ ಪ್ರವೀಣ್ ಶರ್ಮಾ ಘೋಷಣೆಯನ್ನು ಕೂಗಿದ್ದಾನೆ. ಆತ ತನ್ನ ಧ್ವನಿ ಮುಖ್ಯಮಂತ್ರಿಯನ್ನು ತಲುಪಬೇಕೆಂದು ಬಯಸಿದ್ದ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.

ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಬುಧವಾರ ತಮ್ಮ ಅಧಿಕೃತ ನಿವಾಸದಲ್ಲಿ ಜನರ ಅಹವಾಲು ಆಲಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿ ರಾಜ್ ಕೋಟ್ ನಿವಾಸಿ ರಾಜೇಶ್ ಭಾಯಿ ಖೀಮ್ಜಿ ಭಾಯಿ ಸಕಾರಿಯ (41) ಎಂಬಾತನನ್ನು ಬಂಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News