×
Ad

ದಿಲ್ಲಿ ಗಲಭೆ ಪಿತೂರಿ ಪ್ರಕರಣ: ಶರ್ಜೀಲ್ ಇಮಾಮ್ ಗೆ 10 ದಿನಗಳ ಮಧ್ಯಂತರ ಜಾಮೀನು

Update: 2026-03-09 16:52 IST

ಶರ್ಜೀಲ್ ಇಮಾಮ್ (Photo credit: PTI)

ಹೊಸದಿಲ್ಲಿ: 2020ರಲ್ಲಿ ನಡೆದ ದಿಲ್ಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರಿಗೆ ತಮ್ಮ ಸಹೋದರನ ಮದುವೆಯಲ್ಲಿ ಭಾಗವಹಿಸಲು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು ನೋಡಿಕೊಳ್ಳಲು ದಿಲ್ಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

2020ರಲ್ಲಿ ದಿಲ್ಲಿಯಲ್ಲಿ ನಡೆದ ಗಲಭೆಗಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಶರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಲಾಗಿತ್ತು. ಕಾಯ್ದೆಯ ಸೆಕ್ಷನ್ 15ಎ ಸೇರಿದಂತೆ ಹಲವು ವಿಧಿಗಳಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಈ ವರ್ಷದ ಜನವರಿ 5ರಂದು ಸುಪ್ರೀಂ ಕೋರ್ಟ್‌ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಇಬ್ಬರಿಗೂ ಜಾಮೀನು ನಿರಾಕರಿಸಿತ್ತು. ಆದರೆ ಅದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಇನ್ನೂ ಐದು ಮಂದಿಗೆ ಜಾಮೀನು ನೀಡಲಾಗಿತ್ತು. ಜಾಮೀನು ಪಡೆದವರಲ್ಲಿ ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ-ಉರ್-ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸೇರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News