×
Ad

ದಿಲ್ಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಆ. 8ರವರೆಗೆ ವಿಸ್ತರಣೆ

Update: 2024-07-25 14:19 IST

ಅರವಿಂದ್ ಕೇಜ್ರಿವಾಲ್ | PTI

ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಸಂಬಂಧ ಸಿಬಿಐ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 8ರವರೆಗೆ ವಿಸ್ತರಿಸಿ ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ.

ಅರವಿಂದ್ ಕೇಜ್ರಿವಾಲ್ ರನ್ನು ತಿಹಾರ್ ಕಾರಾಗೃಹದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು.

ಸದ್ಯ ಹಿಂಪಡೆಯಲಾಗಿರುವ ದಿಲ್ಲಿ ಅಬಕಾರಿ ನೀತಿ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದಾಖಲಿಸಿಕೊಂಡಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜುಲೈ 12ರಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಅರವಿಂದ್ ಕೇಜ್ರಿವಾಲ್ ಅವರು ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಕುರಿತಂತೆ ಹಲವಾರು ಕಾನೂನಾತ್ಮಕ ಪ್ರಶ್ನೆಗಗಳಿರುವುದರಿಂದ, ಆ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಬೇಕಾದ ಅಗತ್ಯವಿದೆ ಎಂದು ನ್ಯಾ. ಸಂಜೀವ್ ಖನ್ನಾ ಹಾಗೂ ದೀಪಾಂಕರ ದತ್ತ ಅವರನ್ನೊಳಗೊಂಡ ನ್ಯಾಯಪೀಠವು ಅಭಿಪ್ರಾಯ ಪಟ್ಟಿತು.

ಆದರೆ, ಕೇಂದ್ರೀಯ ತನಿಖಾ ದಳ(ಸಿಬಿಐ)ವು ತಮ್ಮನ್ನು ಭ್ರಷ್ಟಾಚಾರದ ಪ್ರಕರಣದಲ್ಲಿ ಪ್ರತ್ಯೇಕವಾಗಿ ಬಂಧಿಸಿರುವುದರಿಂದ, ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಕಾರಾಗೃಹದಲ್ಲೇ ಉಳಿಯಲು ನಿರ್ಧರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News