×
Ad

ದಿಲ್ಲಿ ಅಬಕಾರಿ ನೀತಿ ಪ್ರಕರಣ | ಈಡಿ ದೂರುಗಳ ಕುರಿತು ಸಮನ್ಸ್: ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

Update: 2024-03-14 23:01 IST

Photo Credit: The Hindu

ಹೊಸದಿಲ್ಲಿ : ಜಾರಿ ನಿರ್ದೇಶನಾಲಯ (ಈಡಿ)ದ ದೂರುಗಳಿಗೆ ಸಂಬಂಧಿಸಿದಂತೆ ಹೆಚ್ಚುವರಿ ಮುಖ್ಯ ಮಹಾನಗರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ (ಎಸಿಎಂಎಂಸಿ)ವು ತನಗೆ ಹೊರಡಿಸಿರುವ ಸಮನ್ಸ್ ವಿರುದ್ಧ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಗುರುವಾರ ಸೆಷನ್ಸ್ ನ್ಯಾಯಾಲಯದ ಮೆಟ್ಟಿಲನ್ನೇರಿದ್ದಾರೆ.

ದಿಲ್ಲಿ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಮುಂದೆ ಹಾಜರಾಗುವಂತೆ ಈಡಿ ಜಾರಿಗೊಳಿಸಿದ್ದ ಸಮನ್ಸ್ ಗಳಿಗೆ ಕೇಜ್ರಿವಾಲ್ ಸೊಪ್ಪು ಹಾಕಿರಲಿಲ್ಲ. ಈ ಬಗ್ಗೆ ಈಡಿ ಎಸಿಎಂಎಂಸಿಗೆ ದೂರುಗಳನ್ನು ಸಲ್ಲಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News