×
Ad

ಅಗಸ್ಟಾವೆಸ್ಟ್ ಲ್ಯಾಂಡ್ ಪ್ರಕರಣ | ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಜೇಮ್ಸ್‌ಗೆ ಜಾಮೀನು

Update: 2025-03-04 22:24 IST

ಹೊಸದಿಲ್ಲಿ: 3,600 ಕೋಟಿ ರೂ. ಅಗಸ್ಟಾ ವೆಸ್ಟ್‌ಲ್ಯಾಂಡ್ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ಜೇಮ್ಸ್‌ಗೆ ದಿಲ್ಲಿ ಉಚ್ಚ ನ್ಯಾಯಾಲಯ ಮಂಗಳವಾರ ಜಾಮೀನು ನೀಡಿದೆ.

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಜೇಮ್ಸ್ ಸಲ್ಲಿಸಿದ್ದ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಫೆಬ್ರವರಿ 28ರಂದು ಕಾಯ್ದಿರಿಸಿತ್ತು. ಇಂದು ಅವರು ಜೇಮ್ಸ್‌ಗೆ ಜಾಮೀನು ನೀಡಿದ್ದಾರೆ. ಈ ಹಿಂದೆ ಸಿಬಿಐ ಪ್ರಕರಣಕ್ಕೆ ಸಂಬಂಧಿಸಿ ಜೆಮ್ಸ್‌ಗೆ ಸುಪ್ರೀಂ ಕೋರ್ಟ್ ಪೆಬ್ರವರಿ 18ರಂದು ಜಾಮೀನು ನೀಡಿತ್ತು.

ಇಟಲಿಯ ವಿಮಾನ ನಿರ್ಮಾಣ ಕಂಪೆನಿ ಅಗಸ್ಟಾವೆಸ್ಟ್‌ಲ್ಯಾಂಡ್‌ನಿಂದ 12 ವಿವಿಐಪಿ ಹೆಲಿಕಾಪ್ಟರ್‌ಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ತನಿಖೆ ಸಂಸ್ಥೆಗಳು ಆರೋಪಿಸಿದ್ದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News