×
Ad

ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆಗೂ, ನಗದು ಪತ್ತೆಗೂ ಯಾವುದೇ ಸಂಬಂಧವಿಲ್ಲ : ಸುಪ್ರೀಂ ಕೋರ್ಟ್

Update: 2025-03-21 22:04 IST

photo | PTI

ಹೊಸದಿಲ್ಲಿ : ದಿಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಿರುವುದಕ್ಕೂ, ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿರುವ ಬಗ್ಗೆ indiatoday ವರದಿ ಮಾಡಿದೆ.

ನಗದು ಪತ್ತೆ ಕುರಿತು ಆಂತರಿಕ ವಿಚಾರಣೆ ನಡೆಸಲಾಗುತ್ತಿದೆ. ವರ್ಗಾವಣೆ ಆದೇಶವು ನಗದು ಪತ್ತೆ ಕುರಿತ ತನಿಖೆಗೆ ಸಂಬಂಧಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನಗದು ಪತ್ತೆಗೆ ಸಂಬಂಧಿಸಿ ವರ್ಗಾವಣೆ ಮಾಡಲಾಗಿದೆ ಎಂಬ ವದಂತಿಯನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ನಿವಾಸದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಮತ್ತು ವದಂತಿಗಳನ್ನು ಹರಡಲಾಗುತ್ತಿದೆ ಎಂದು ತಿಳಿಸಿದೆ.

ನಗದು ಪತ್ತೆ ವಿಚಾರಕ್ಕೆ ಸಂಬಂಧಿಸಿ ದಿಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಾಧೀಶರು ಈಗಾಗಲೇ ಈ ಕುರಿತು ಆಂತರಿಕ ವಿಚಾರಣೆ ಪ್ರಾರಂಭಿಸಿದ್ದಾರೆ. ಘಟನೆಗೆ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಈ ವಿಚಾರಣೆಯ ಫಲಿತಾಂಶಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಅವರಿಗೆ ಸಲ್ಲಿಸುವ ನಿರೀಕ್ಷೆಯಿದೆ.

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವರ್ಗಾವಣೆಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ನಾಲ್ವರು ಹಿರಿಯ ನ್ಯಾಯಾಧೀಶರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News