×
Ad

2020ರ Delhi ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿಗಳ ಕುರಿತು ಸೋಮವಾರ ಸುಪ್ರೀಂ ಕೋರ್ಟ್‌ ತೀರ್ಪು

Update: 2026-01-03 20:32 IST

ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ | Photo Credit : PTI 

ಹೊಸದಿಲ್ಲಿ: 2020ರ ದಿಲ್ಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಮತ್ತಿತರರ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ಪ್ರಕಟಿಸಲಿದೆ. ಈ ಪ್ರಕರಣದಲ್ಲಿ ಮೀರಾ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಇತರ ಅರ್ಜಿದಾರರಾಗಿದ್ದಾರೆ.

ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು, ಡಿಸೆಂಬರ್ 2025ರಲ್ಲಿ ದಿಲ್ಲಿ ಹೈಕೋರ್ಟ್ ಜಾಮೀನು ನಿರಾಕರಿಸಿದ್ದ ಸೆಪ್ಟೆಂಬರ್ 2ರ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿತ್ತು.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ(UAPA) ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಆರೋಪಿಗಳು ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News