×
Ad

ವಾರಣಾಸಿಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆ

Update: 2024-05-28 23:36 IST

Photo : PTI

ಹೊಸದಿಲ್ಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೊ ವಿಮಾನಕ್ಕೆ ಬಾಂಬ್ ಬೆದರಿಕೆಯನ್ನು ಇಲ್ಲಿನ ವಿಮಾನ ನಿಲ್ದಾಣ ಗುರುವಾರ ಬೆಳಗ್ಗೆ ಸ್ವೀಕರಿಸಿದೆ. ಆದರೆ, ವಿಮಾನದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಬಳಿಕ ಇದೊಂದು ಹುಸಿ ಬಾಂಬ್ ಬೆದರಿಕೆ ಎಂಬುದು ತಿಳಿದುಬಂತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ವಿಮಾನದಲ್ಲಿದ್ದ ಸಿಬ್ಬಂದಿ ಹಾಗೂ 176 ಪ್ರಯಾಣಿಕರನ್ನು ತೆರವುಗೊಳಿಸಿದರು. ಅಲ್ಲದೆ, ಶೋಧ ಕಾರ್ಯಾಚರಣೆ ನಡೆಸಿದರು ಎಂದು ಅವರು ತಿಳಿಸಿದ್ದಾರೆ.

ವಾರಣಾಸಿಗೆ ತೆರಳಲಿದ್ದ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಮುಂಜಾನೆ ಸುಮಾರು 5 ಗಂಟೆಗೆ ಕಾಗದದ ತುಂಡೊಂದು ಪತ್ತೆಯಾಗಿತ್ತು. ಈ ಕಾಗದದಲ್ಲಿ ಲಿಖಿತವಾಗಿ ಬಾಂಬ್ ಬೆದರಿಕೆ ಒಡ್ಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೂಲಂಕುಷ ತಪಾಸಣೆ ನಡೆಸಲಾಯಿತು. ಆದರೆ, ಸಂದೇಹಾಸ್ಪದವಾದ ಯಾವುದೇ ವಸ್ತು ಪತ್ತೆಯಾಗಿಲ್ಲ. ಅನಂತರ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ತಿಳಿಯಿತು. ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News