×
Ad

45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ ದೃಶ್ಯಗಳನ್ನು ನಾಶಮಾಡಿ: ಅಧಿಕಾರಿಗಳಿಗೆ ಚುನಾವಣಾ ಆಯೋಗದ ಸೂಚನೆ

Update: 2025-06-20 12:39 IST

ಚುನಾವಣಾ ಆಯೋಗ (File Photo)

ಹೊಸದಿಲ್ಲಿ: 45 ದಿನಗಳ ನಂತರ ಚುನಾವಣಾ ಪ್ರಕ್ರಿಯೆಯ ಸಿಸಿಟಿವಿ ದೃಶ್ಯಗಳನ್ನು ನಾಶ ಮಾಡುವಂತೆ ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ದೃಶ್ಯಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಅದು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಸೂಚನೆಯನ್ವಯ 45 ದಿನಗಳ ಒಳಗೆ ಚುನಾವಣೆಯ ತೀರ್ಪನ್ನು ನ್ಯಾಯಾಲಯದಲ್ಲಿ ಪ್ರಶ್ನಿಸದಿದ್ದರೆ ಸಿಸಿಟಿವಿ ಕ್ಯಾಮೆರಾ, ವೆಬ್‌ಕಾಸ್ಟಿಂಗ್ ಮತ್ತು ಚುನಾವಣಾ ಪ್ರಕ್ರಿಯೆಯ ವೀಡಿಯೊ ದೃಶ್ಯಗಳನ್ನು ನಾಶಪಡಿಸಲು ಸೂಚಿಸಿದೆ.

ಮೇ 30 ರಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, ಚುನಾವಣಾ ಪ್ರಕ್ರಿಯೆಯ ಸಮಯದಲ್ಲಿ ಫೋಟೋಗ್ರಫಿ ವೀಡಿಯೊಗ್ರಫಿ, ಸಿಸಿಟಿವಿ ಮತ್ತು ವೆಬ್‌ಕಾಸ್ಟಿಂಗ್ ಸೇರಿದಂತೆ ಬಹು ರೆಕಾರ್ಡಿಂಗ್ ಸಾಧನಗಳ ಮೂಲಕ ಚುನಾವಣಾ ಪ್ರಕ್ರಿಯೆಯ ವಿವಿಧ ಹಂತಗಳನ್ನು ರೆಕಾರ್ಡ್ ಮಾಡಲು ಸೂಚನೆಗಳನ್ನು ನೀಡಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

ಚುನಾವಣೆಯ ಸಂದರ್ಭದಲ್ಲಿ ರೆಕಾರ್ಡ್ ಮಾಡಿದ ವಿಡಿಯೋಗಳನ್ನು ಆಯಾ ಕ್ಷೇತ್ರದ ಸ್ಪರ್ಧಿಗಳಲ್ಲದವರೂ ಸಾಮಾಜಿಕ ಮಾಧ್ಯಮಗಳಲ್ಲಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಹೆಚ್ಚಾಗಿರುವುದರಿಂದ ಚುನಾವಣಾ ಆಯೋಗವು ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಅದರಂತೆ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಚುನಾವಣಾ ಆಯೋಗಗಳಿಗೆ ಬರೆದ ಪತ್ರದಲ್ಲಿ 45 ದಿನಗಳವರೆಗೆ ಮಾತ್ರ ವಿಡಿಯೋಗಳನ್ನು ಸಂರಕ್ಷಿಸಿ ಇಡುವಂತೆ ಸೂಚಿಸಿದೆ. ಆ ಬಳಿಕ ಅದನ್ನು ಅಳಿಸಿ ಹಾಕುವಂತೆ ಸೂಚನೆ ನೀಡಿದೆ.

"ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಚುನಾವಣಾ ಅರ್ಜಿಯನ್ನು ಸಲ್ಲಿಸದಿದ್ದರೆ, ಆ ದತ್ತಾಂಶವನ್ನು ನಾಶಪಡಿಸಬಹುದು" ಎಂದು ಸೂಚನೆಯಲ್ಲಿ ಹೇಳಲಾಗಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ, ಸಿಸಿಟಿವಿ ಕ್ಯಾಮೆರಾ ಮತ್ತು ವೆಬ್‌ಕಾಸ್ಟಿಂಗ್ ದೃಶ್ಯಗಳಂತಹ ಕೆಲವು ಎಲೆಕ್ಟ್ರಾನಿಕ್ ದಾಖಲೆಗಳನ್ನು ಸಾರ್ವಜನಿಕವಾಗಿ ಪರೀಕ್ಷಿಸುವುದನ್ನು ತಡೆಗಟ್ಟಲು ಮತ್ತು ಅಭ್ಯರ್ಥಿಗಳ ವೀಡಿಯೊ ರೆಕಾರ್ಡಿಂಗ್‌ಗಳನ್ನು ತಡೆಗಟ್ಟಲು ಸರ್ಕಾರವು ಚುನಾವಣಾ ನಿಯಮವನ್ನು ತಿದ್ದುಪಡಿ ಮಾಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News