×
Ad

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ‘ವೈಕಂ ಪ್ರಶಸ್ತಿ’ ಪ್ರದಾನ

Update: 2024-12-12 15:35 IST

Photo: X/@CMOTamilnadu

ಕೇರಳ: ತಮಿಳುನಾಡು ಸರ್ಕಾರ ನೀಡುವ 2024ನೇ ಸಾಲಿನ ‘ವೈಕಂ ಪ್ರಶಸ್ತಿ’ಯನ್ನು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ನೀಡಿ ಗೌರವಿಸಲಾಗಿದೆ.

ಕೇರಳದ ವೈಕಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ‘ವೈಕಂ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು.

ಇದೇ ವೇಳೆ ದೇವನೂರ ಮಹಾದೇವ ಅವರು ತಾವು ಬರೆದಿರುವ ʻಆರೆಸ್ಸೆಸ್ ಆಳ ಅಗಲʼ ಪುಸ್ತಕದ ಕನ್ನಡ, ಇಂಗ್ಲಿಷ್ ಮತ್ತು ಮಲಯಾಳಂ ಅವೃತಿಯನ್ನು ಕೇರಳ ಸಿಎಂ ವಿಜಯನ್ ಅವರಿಗೆ ಮತ್ತು ಕನ್ನಡ, ಇಂಗ್ಲಿಷ್, ತಮಿಳು ಆವೃತಿಯನ್ನು ತಮಿಳುನಾಡು ಸಿಎಂ ಸ್ಟಾಲಿನ್ ಅವರಿಗೆ ನೀಡಿದ್ದಾರೆ.

ಪೆರಿಯಾರ್ ರಾಮಸ್ವಾಮಿ ಅವರ ನೇತೃತ್ವದಲ್ಲಿ ಕೇರಳದ ವೈಕಂನಲ್ಲಿ ನಡೆದಿದ್ದ ವೈಕಂ ಹೋರಾಟಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆ ಶತಮಾನೋತ್ಸವ ಸಮಾರಂಭ ಮತ್ತು ಪೆರಿಯಾರ್ ಸ್ಮಾರಕ ಉದ್ಘಾಟನಾ ಕಾರ್ಯಕ್ರವನ್ನು ಕೇರಳದ ವೈಕಂನಲ್ಲಿ ತಮಿಳುನಾಡು ಸರ್ಕಾರ ಗುರುವಾರ ಹಮ್ಮಿಕೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News